More

    ಮಾಲ್‌ಗಳನ್ನು ತೆರೆಯುವ ಕುರಿತು ಶೀಘ್ರವೇ ಕೇಂದ್ರದ ನಿರ್ಧಾರ

    ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿಗಳಿಗಾಗಿ ಕಾಯುತ್ತಿದ್ದು, ಅವು ಬಂದ ತಕ್ಷಣವೇ ದೇಶಾದ್ಯಂತ ಮಾಲ್‌ಗಳನ್ನು ತೆರೆಯುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

    ವಿವಿಧ ರಾಜ್ಯಗಳ ಟ್ರೇಡರ್ಸ್‌ ಅಸೋಸಿಯೇಷನ್ ಪದಾಧಿಕಾರಿಗಳ ಜತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ಈಗಾಗಲೇ ಹಲವು ಬಾರಿ ಲಾಕ್‌ಡೌನ್ ಸಡಿಲಿಕೆಯಾಗಿದ್ದರೂ ಅಂಗಡಿ-ಮುಂಗಟ್ಟುಗಳು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಹಲವಾರು ಅಡ್ಡಿ-ಆತಂಕಗಳಿವೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದನ್ನೂ ನಿವಾರಿಸಲಾಗುವುದು ಎಂದು ಭರವಸೆ ನೀಡಿದರು.

    ಇದನ್ನೂ ಓದಿ: ಹಸುವಿನ ಮೈ ತೊಳೆಸಲು ಕೆರೆಗೆ ಇಳಿದ ಬಾಲಕರು ನೀರುಪಾಲು..

    ಕರೊನಾ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಘೋಷಿಸಿರುವ 3 ಲಕ್ಷ ರೂ.ಗಳ ಸಾಲ ಸೌಲಭ್ಯ ಅಂಗಡಿ-ಮುಂಗಟ್ಟುಗಳ ಮಾಲೀಕರಿಗೂ ಅನ್ವಯವಾಗುತ್ತದೆ ಎಂದು ಗೋಯಲ್ ಸ್ಪಷ್ಟಪಡಿಸಿದರು.

    ದೊಡ್ಡ ಬಂಡವಾಳ ಹೊಂದಿರುವ ಬಹುರಾಷ್ಟ್ರೀಯ ಕಂಪನಿಗಳ ಬಗ್ಗೆ ಸ್ಥಳೀಯ ವ್ಯಾಪಾರಿಗಳು ಹೆದರುವ ಅಗತ್ಯವಿಲ್ಲ. ಕರೊನಾದಂತಹ ಸಂಕಷ್ಟದ ಸಮಯದಲ್ಲಿ ಮನೆ ಸಮೀಪದ ಕಿರಾಣಿ ಅಂಗಡಿಗಳೇ ತಮ್ಮ ನೆರವಿಗೆ ಬಂದಿದ್ದನ್ನು ಜನ ಮನಗಂಡಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts