ಗಾಂಧಿ ಕುಟುಂಬದ ಸಲಹೆ, ಮಾರ್ಗದರ್ಶನ ಪಡೆಯಲು ನಾಚಿಕೆಯೇನಿಲ್ಲ: ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ಬೆಂಗಳೂರು: ಒಂದೆರಡು ಚುನಾವಣೆಗಳಲ್ಲಿ ಹಿನ್ನಡೆಯಾಗಿದೆ ಎಂದ ಮಾತ್ರಕ್ಕೆ ಗಾಂಧಿ ಕುಟುಂಬವನ್ನು ಕಡಿಮೆ ಅಂದಾಜು ಮಾಡಬಾರದು. ಗಾಂಧಿ ಕುಟುಂಬದ ಸಲಹೆ, ಮಾರ್ಗದರ್ಶನ ಪಡೆಯಲು ನಾಚಿಕೆಯೇನಿಲ್ಲ ಎಂದು ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡರು. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಖರ್ಗೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತದೆ. ಅದಕ್ಕೆ ಇನ್ನೂ ಕೆಲವರು ದನಿಗೂಡಿಸುತ್ತಿದ್ದಾರಷ್ಟೇ. ಇಂತಹಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿವರೆಗೆ … Continue reading ಗಾಂಧಿ ಕುಟುಂಬದ ಸಲಹೆ, ಮಾರ್ಗದರ್ಶನ ಪಡೆಯಲು ನಾಚಿಕೆಯೇನಿಲ್ಲ: ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ