More

    ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯನ್ನು ಜನ ಈಗಲೂ ನೆನಪಿಸಿಕೊಳ್ಳತ್ತಾರೆ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಹಾಲಿ ನಡೆಯುತ್ತಿರುವ ಬಜೆಟ್​ ಅಧಿವೇಶನದಲ್ಲಿ ಮಸೂದೆಗಳನ್ನು ತರಾತುರಿಯಲ್ಲಿ ಮಂಡಿಸಲಾಗುತ್ತಿದೆ. ಸದನದಲ್ಲಿ ಸರಿಯಾದ ಚರ್ಚೆಗೆ ಅವಖಾಶ ನೀಡುತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

    ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯಲ್ಲಿ ದೇಶವು ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ ಎಂದು ಹೇಳಿದ್ದಾರೆ.

    ಸದನದಲ್ಲಿ ಸರಿಯಾದ ಚರ್ಚೆ ಮಾಡದೆ ಮಸೂದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ಮೇಲ್ಮನೆಯಲ್ಲಿ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರಿಗೆ ಸಾಕಷ್ಟು ಸಮಯ ನೀಡಲಾಗುತ್ತಿಲ್ಲ. ಪ್ರತಿಪಕ್ಷದ ಸದಸ್ಯರನ್ನು ಅಮಾನತು ಮಾಡುವ ಮೂಲಕ ಸದನದಲ್ಲಿ ವಿಧೇಯಕಗಳನ್ನು ಅಂಗೀಕರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಒಂದು ಕಾಲದಲ್ಲಿ ಅಸಿಸ್ಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ನಟ ಇಂದು 2900 ಕೋಟಿ ರೂ. ಒಡೆಯ

    ದಯವಿಟ್ಟು ತರಾತುರಿಯಲ್ಲಿ ಮಸೂದೆಗಳನ್ನು ಅಂಗೀಕರಿಸಬೇಡಿ. ವಿಧೇಯಕಗಳ ಬಗ್ಗೆ ಸರಿಯಾದ ಚರ್ಚೆ ನಡೆಯದೆ, ಕಾನೂನುಗಳಲ್ಲಿ ತಪ್ಪುಗಳಾಗುವ ಸಾಧ್ಯತೆಗಳಿವೆ. ಅವುಗಳನ್ನು ಸರಿಪಡಿಸಲು ನಂತರ ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಹೇಳಿದ್ದಾರೆ.

    ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯಲ್ಲಿ ದೇಶವು ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ. ಸಿಂಗ್, ಆಹಾರ ಕಾನೂನು ಮತ್ತು ಮಾಹಿತಿ ಹಕ್ಕು ಸೇರಿದಂತೆ ತಮ್ಮ ಅಧಿಕಾರಾವಧಿಯಲ್ಲಿ ಅಂಗೀಕರಿಸಿದ ವಿವಿಧ ಪ್ರಮುಖ ಮಸೂದೆಗಳನ್ನು ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts