ಕಲಬುರಗಿ: ರಾಜ್ಯ ಕಾಂಗ್ರೆಸ್ನಲ್ಲಿ ದಿನ ಕಳೆದಂತೆ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷರ ಬಗೆಗಿನ ಮಾತು ಪ್ರಮುಖವಾಗಿ ಕೇಳಿ ಬರುತ್ತಿವೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಓಡಿಸ್ಸಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರ ಕೂಗಿಗೆ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಧ್ವನಿಗೂಡಿಸಿದ್ದಾರೆ.
ಈ ಬಗ್ಗೆ ಯಾರನ್ನು ಬದಲಾವಣೆ ಮಾಡಲಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ಹೇಳಲಿಕ್ಕೆ ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದೆರಡು ದಿನದಲ್ಲಿ ಕೆಲವು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತೇವೆ. ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ನನ್ನ ಭೇಟಿ ಮಾಡಿರುವುದು ದೊಡ್ಡ ವಿಚಾರ ಏನಲ್ಲ. ನಾನು ಎಐಸಿಸಿ ಅಧ್ಯಕ್ಷ ಎಲ್ಲರೂ ಬಂದು ಭೇಟಿ ಮಾಡುತ್ತಾರೆ ಇದು ದೊಡ್ಡ ಮಾತಾ. ನಮ್ಮ ರಾಜ್ಯದವರಿಗೆ ಬೇಗ ಅಪಾಯಿಂಟಮೆಂಟ್ ಸಿಗುತ್ತದೆ. ಬಂದವರಿಗೆ ಬೇಡ ಅನ್ನಲು ಆಗುತ್ತಾ. ಎಲ್ಲರೂ ಬಂದು ಭೇಟಿ ಆಗುತ್ತಾರೆ. ಡಾ.ಜಿ.ಪರಮೇಶ್ವರ ಬರ್ತಾರೆ, ಡಿಕೆ ಶಿವಕುಮಾರ ಬರುತ್ತಾರೆ ಸತೀಶ್ ಜಾರಕಿಹೊಳಿ ಬರುತ್ತಾರೆ, ಸಿಎಂ ಸಿದ್ದರಾಮಯ್ಯ ಫೋನ್ ಮಾಡ್ತಾರೆ ಇದರಲ್ಲಿ ವಿಶೇಷ ಏನಿಲ್ಲ.
ಇದಕ್ಕೆ ಇಲ್ಲದ ಉಹಾಪೋಹ ಸೃಷ್ಟಿಸಿ ಗೊಂದಲ ಸೃಷ್ಟಿ ಮಾಡಬೇಡಿ. ಬೇಡವಾದ ಗೊಂದಲ ಸೃಷ್ಟಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡಿತಿದೆ. ಇದರಿಂದ ನಮ್ಮ ನಾಯಕರೂ ಗೊಂದಲಕ್ಕೆ ಒಳಗಾಗುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.
ಕೈಗೆ ಗ್ರೀನ್ ಬ್ಯಾಂಡ್ ಧರಿಸಿ ಕಣಕ್ಕಿಳಿದ Team India-England ಆಟಗಾರರು; ಅಷ್ಟಕ್ಕೂ ಈ ರೀತಿ ಮಾಡಲು ಕಾರಣವೇನು?
ಪ್ರಯಾಗ್ರಾಜ್ಗೆ ಹೋಗಿ ಕಷ್ಟ ಪಡುವ ಬದಲು ಇಲ್ಲಿಯೇ ಪುಣ್ಯಸ್ನಾನ ಮಾಡಿ: DCM DK Shivakumar