Friday, 16th November 2018  

Vijayavani

Breaking News

‘ಜಯದೇವ ಶ್ರೀ’ ಪ್ರಶಸ್ತಿಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Wednesday, 21.02.2018, 4:54 PM       No Comments

ದಾವಣಗೆರೆ: ಚಿತ್ರದುರ್ಗ ಮುರುಘಾ ಮಠದ ಅಂಗ ಸಂಸ್ಥೆಗಳಾದ ಬಸವಕೇಂದ್ರ, ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್​ನಿಂದ ನೀಡಲಾಗುವ ‘ಜಯದೇವಶ್ರೀ’ ಪ್ರಶಸ್ತಿಗೆ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ನಗರದಲ್ಲಿ ನಡೆಯಲಿರುವ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ 61ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಮಾರ್ಚ್ 3ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುದೀರ್ಘ ರಾಜಕಾರಣದ ಮೂಲಕ ಖರ್ಗೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ಹಾಗೂ ಅವರ ಒಟ್ಟಾರೆ ಜೀವನ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.

ಸಾಹಿತ್ಯ, ಭಾಷೆ, ಸಂಶೋಧನೆ ಕ್ಷೇತ್ರಗಳಿಗೆ ಸಲ್ಲಿಸಿದ ಸೇವೆ ಪರಿಗಣಿಸಿ ಸಾಹಿತಿ ನಾಡೋಜ ಹಂ.ಪ. ನಾಗರಾಜಯ್ಯ ಅವರಿಗೆ ‘ಶೂನ್ಯಪೀಠ ಅಲ್ಲಮ’ ಪ್ರಶಸ್ತಿ, ನೊಂದ ಮಹಿಳೆಯರು ಮತ್ತು ಮಕ್ಕಳ ಪರ ಧ್ವನಿಯಾಗಿ ಕೆಲಸ ಮಾಡುತ್ತಿರುವ ವಕೀಲರಾದ ಪ್ರಮೀಳಾ ನೇಸರ್ಗಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ, ದಾವಣಗೆರೆ ಸಮಾಜ ಸೇವಕ ಡಾ.ಸಿ.ಆರ್.ನಸಿರ್ ಅಹಮ್ಮದ್ ‘ಶೂನ್ಯಪೀಠ ಚನ್ನಬಸವ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ಥಳೀಯ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿದ್ದರು.

Leave a Reply

Your email address will not be published. Required fields are marked *

Back To Top