ಸಿಎಂ ಕುರ್ಚಿ ಚಿಂತೆ ಬಿಡಿ, ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ: ಮಲ್ಲಿಕಾರ್ಜುನ ಖರ್ಗೆ

mallikarjun kharge
Published on

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದು ಸಿಎಂ ಯಾರಾಗುತ್ತಾರೆ ಎನ್ನುವ ಬಗ್ಗೆ ತೆಲೆಕೆಡಿಸಿಕೊಳ್ಳಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷದಲ್ಲಿ ಚುನಾವಣೆಯ ನಂತರ ಬರಬಹುದಾದ ಭಿನ್ನಮತವನ್ನು ಈಗಲೇ ತಡೆಯಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಿಗೆ “ಶಾಸಕರು, ಹೈಕಮಾಂಡ್ ರಾಜ್ಯದ ಮುಖ್ಯಮಂತ್ರಿಯ ಆಯ್ಕೆ ಮಾಡುತ್ತಾರೆ. ಸಿಎಂ ವಿಚಾರ ಬಿಟ್ಟು‌ಕೆಲಸ ಮಾಡಿ” ಎಚ್ಚರಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, “ನಾವು ಅಧಿಕಾರಕ್ಕೆ ಬರಬೇಕು ಅಷ್ಟೇ. 150 ಸೀಟ್ ಬರಬೇಕು. ಜಗದೀಶ್ ಶೆಟ್ಟರ್ ಕೂಡ ಹೇಳಿದ್ದಾರೆ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ‌ ಮುಳುಗಿದೆ ಅಂತ. ನಾವು ರಾಜ್ಯ ಸರ್ಕಾರ ‌ಈ ಬಾರಿ ತೆಗೆಯಬೇಕು. ಡಬಲ್ ಇಂಜಿನ್ ಸರ್ಕಾರದಿಂದ ಏನು ಕೆಲಸ ಆಗಿಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net