18 C
Bangalore
Friday, December 6, 2019

ಮಲ್ಪೆ ನಗರ ಚರಂಡಿ ಅವ್ಯವಸ್ಥೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಉಡುಪಿ: ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಮಲ್ಪೆ ಸೆಂಟ್ರಲ್ ವಾರ್ಡ್‌ನ ವ್ಯಾಪ್ತಿಯಲ್ಲಿ ನಗರದ ಪ್ರಮುಖ ರಸ್ತೆಯ ಚರಂಡಿಗಳು ಮಳೆಗಾಲಕ್ಕೆ ಸಿದ್ಧಗೊಂಡಿಲ್ಲ. ಮಳೆಗಾಲದಲ್ಲಿ ಚರಂಡಿ ಹೂಳೆತ್ತಿದರೆ ಅದೇ ಮಳೆ ನೀರಿನೊಂದಿಗೆ ಆ ಹೂಳು ಮತ್ತೆ ಚರಂಡಿ ಸೇರುತ್ತದೆ. ಹಾಗಾಗಿ ಮಳೆಗಾಲಕ್ಕೆ ಒಂದೆರಡು ತಿಂಗಳು ಮುನ್ನವೇ ಚರಂಡಿಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಬೇಕು. ಆದರೆ ಯಾವುದೇ ರೀತಿಯ ಕೆಲಸಗಳು ಇಲ್ಲಿ ನಡೆದಿಲ್ಲ ಎಂಬುದು ಸಾರ್ವಜನಿಕರ ಆರೋಪ.

ವಾಣಿಜ್ಯ ಮತ್ತು ಪ್ರವಾಸಿ ಕೇಂದ್ರವಾದ ಮಲ್ಪೆ ಸಾಕಷ್ಟು ಜನರ ಓಡಾಡುತ್ತಾರೆ. ನಗರದ ಮುಖ್ಯ ರಸ್ತೆಯ ಎರಡೂ ಬದಿಯಲ್ಲಿ ನೀರು ಹರಿಯುಲು ವ್ಯವಸ್ಥಿತ ಚರಂಡಿ ವ್ಯವಸ್ಥೆ ಇಲ್ಲದಾಗಿದೆ. ಮಳೆ ನೀರು ರಸ್ತೆಯಲ್ಲೇ ಹರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ವರ್ಷಗಳಿಂದ ಈ ಪ್ರದೇಶದ ತೋಡಿನ ಹೂಳು ತೆಗಯದ ಪರಿಣಾಮ ಕಾರಣ ಚರಂಡಿಯೇ ನಾಮಾವಶೇಷಗೊಂಡಿದೆ. ಯುಬಿಎಂ ದೇವಾಲಯ, ಸಿಂಡಿಕೇಟ್ ಬ್ಯಾಂಕ್, ಮಸೀದಿ ಮುಂಭಾಗದ ರಸ್ತೆಯ ಬದಿಯ ತೋಡಿನಲ್ಲಿ ಗಿಡಗಂಟಿಗಳು ಬೆಳೆದು ನಿಂತು ನೀರು ಹರಿಯಲು ತಡೆಯೊಡ್ಡಿದೆ. ಕೊಪ್ಪಲತೋಟ ರೈಸ್ ಮಿಲ್ ಬಳಿ, ಹನುಮಾನ್‌ನಗರ ಭಜನಾ ಮಂದಿರ ಹಿಂಬದಿ ತೋಡಿನ ಹೂಳು ತೆಗೆಯುವ ಕಾರ್ಯ ನಡೆದಿಲ್ಲ. ಕೂಡಲೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೃತಕ ನೆರೆ ಸೃಷ್ಟಿ: ಮುಖ್ಯರಸ್ತೆಯ ಅಂಗಡಿಗಳ ಮೆಟ್ಟಿಲುಗಳು ಚರಂಡಿಯನ್ನು ಮುಚ್ಚಿ ನಿರ್ಮಿಸಲಾಗಿದೆ. ಕೆಲವೆಡೆ ಮಾತ್ರ ಚರಂಡಿಗಳು ಗೋಚರಿಸುತ್ತವೆ. ಉಳಿದ ಕಡೆಯ ಚರಂಡಿಗಳು ಮಣ್ಣಿನಿಂದ ಮುಚ್ಚಿ ಹೋಗಿ ರಸ್ತೆಯಾಗಿ ಬಿಟ್ಟಿದೆ. ಹಾಗಾಗಿ ಪ್ರತಿ ಮಳೆಗಾಲದಲ್ಲಿ ಜೋರಾದ ಮಳೆಗೆ ಕೃತಕ ನೆರೆ ಉಂಟಾಗಿ ಮಳೆನೀರು ರಸ್ತೆಯಲ್ಲಿ ಹರಿಯುತ್ತಿದೆ. ಹೂಳು ತುಂಬಿದ ಚರಂಡಿ, ಮುಡುಗಟ್ಟಿ ನಿಲ್ಲುವ ಕೊಳಚೆ ಸಹಿತ ಮಳೆನೀರು, ಜತೆ ಸೊಳ್ಳೆಗಳ ಕಾಟದಿಂದಾಗಿ ಅಂಗಡಿ ಮುಂಗಟ್ಟು ವ್ಯಾಪಾರಸ್ಥರು ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ ಎಂದು ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮಲ್ಪೆ ಆದಿ ಉಡುಪಿ ರಸ್ತೆ ಅಗಲೀಕರಣ ಯೋಜನೆ ಪ್ರಸ್ತಾವ ಇನ್ನೂ ಬಾಕಿ ಇರುವ ಹಿನ್ನೆಲೆಯಲ್ಲಿ ಚರಂಡಿ ನಿರ್ಮಾಣ ಯೋಜನೆಯು ಬಾಕಿ ಇದೆ.

ಚರಂಡಿಯಲ್ಲಿ ಕಸಕಡ್ಡಿ: ಮಲ್ಪೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ (ಫಿಶರೀಸ್) ಮುಂದೆ ಚರಂಡಿಗೆ ಸಮೀಪದ ಕಟ್ಟಡಗಳ ಕೊಳಚೆ ನೀರು ಹರಿದು ಬಂದು ಸೇರಿಕೊಳ್ಳುತ್ತಿದೆ. ಇದರೊಂದಿಗೆ ಕಸ, ಕಡ್ಡಿ, ತ್ಯಾಜ್ಯ ಸೇರಿ ಚರಂಡಿ ಸಂಪೂರ್ಣ ಮುಚ್ಚಿದೆ. ಮಳೆ ನೀರು ರಸ್ತೆಯಲ್ಲಿ ಶೇಖರಣೆಗೊಳ್ಳುತ್ತಿದೆ. ಇದರಿಂದ ಶಾಲೆ ಮಕ್ಕಳಿಗೆ ಸಮಸ್ಯೆಯಾಗುತ್ತಿದ್ದು, ಸಾಂಕ್ರಾಮಿಕ ರೋಗಭೀತಿ ಕಾಡುತ್ತಿದೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...