

ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದ್ದು, 10 ಅಶ್ವಶಕ್ತಿ ಹೆಚ್ಚು ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕಾ ಚಟುವಟಿಕೆ ಕೈಗೊಳ್ಳುವಂತಿಲ್ಲ. ಸೂಚನೆ ಉಲ್ಲಂಘಿಸಿ ಮೀನುಗಾರಿಕೆ ಮಾಡಿದರೆ ಅಂತವರ ವಿರುದ್ಧ ಕಾನೂನುಕ್ರಮಕೈಗೊಳ್ಳಲಾಗುವುದು. ಪರವಾನಿಗೆ, ಕರ ರಹಿತ ಡಿಸೇಲ್ ಸಹಿತ ಎಲ್ಲಾ ಸೌಲಭ್ಯ ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.