More

    KPSC ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ವಂಚನೆ: 9 ಮಂದಿ ವಿರುದ್ಧ ಎಫ್​ಐಆರ್​ ದಾಖಲು, ತೀವ್ರಗೊಂಡ ತನಿಖೆ

    ಯಾದಗಿರಿ: ಜಿಲ್ಲೆಯಲ್ಲಿ ನಡೆದ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ 5 ಕಾಲೇಜಿನಲ್ಲಿ ಪರೀಕ್ಷೆ ಬರೆದ ಕೆಲ ಅಭ್ಯರ್ಥಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

    ಯಾದಗಿರಿಯ ನ್ಯೂ ಕನ್ನಡ ಪಿಯು ಕಾಲೇಜು, ಸಬಾ ಪಿಯು ಕಾಲೇಜ್, ಸರಕಾರಿ ಬಾಲಕಿಯ ಪಿಯು ಕಾಲೇಜು, ಎಲ್ ಕೆಇಟಿ ಬಾಲಕಿಯರ ಪಿಯು ಕಾಲೇಜು ಹಾಗೂ ಮಹಾತ್ಮ ಗಾಂಧಿ ಪಿಯು ಕಾಲೇಜುಗಳಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎನ್ನಲಾಗಿದ್ದು, ಈ ಐದು ಕಾಲೇಜಿನಲ್ಲಿ ಪರೀಕ್ಷೆಯನ್ನು ಬರೆದ ಕೆಲ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಇಂದು ರಾಜ್ಯಾದ್ಯಂತ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯಿತು. ಈ ವೇಳೆ ಹಲವರು ಬ್ಲೂಟೂತ್ ಸಾಧನವನ್ನು ಬಳಸಿಕೊಂಡು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 109, 114, 120(ಬಿ) ಹಾಗೂ 420 ಅಡಿಯಲ್ಲಿ ಕಲಬುರಗಿ ಹಾಗೂ ವಿಜಯಪುರ ಜಿಲ್ಲೆ ಸೇರಿದಂತೆ 9 ಆರೋಪಿಗಳ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

    ಸದ್ಯ 9 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ​ ಜಿ.ಸಂಗೀತಾ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ತಂಡಗಳಲ್ಲಿ ಪೊಲೀಸ್ ಅಧಿಕಾರಿಗಳಿಂದ ತನಿಖೆ ಆರಂಭವಾಗಿದೆ.

    ಪರೀಕ್ಷಾ ಕೇಂದ್ರದಲ್ಲಿ ಏನಾಯಿತು?
    ಪಿಎಸ್‌ಐ ಪರೀಕ್ಷಾ ಹಗರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಪರೀಕ್ಷೆ ಬರೆದ ಅಭ್ಯರ್ಥಿಗಳ ಫಲಿತಾಂಶವೇ ಇನ್ನೂ ಅತಂತ್ರದಲ್ಲಿದೆ. ಹೀಗಿರುವಾಗ ಇಂದು ರಾಜ್ಯಾದ್ಯಂತ ನಡೆದ ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆಯಲ್ಲೂ ಇದೇ ಅಕ್ರಮ ಮರುಕಳಿಸಿದೆ. ಪುಟ್ಟಪ್ಪ ಎಂಬ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷಾ ಕೇಂದ್ರದಲ್ಲಿ ಸಿಕ್ಕಿಬಿದ್ದಿದ್ದಾನೆ. ಪುಟ್ಟಪ್ಪ ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನಾ ಗ್ರಾಮದ ನಿವಾಸಿ. ಪಿಎಸ್​ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕೂಡ ಇದೇ ಗ್ರಾಮದವನು ಎನ್ನಲಾಗಿದೆ. ಆರೋಪಿ ಪುಟ್ಟಪ್ಪ, ಆರೋಪಿ ತಂದೆ ರಾಜಕುಮಾರ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಸೀನಿಯರ್ ಅಸಿಸ್ಟೆಂಟ್ ಹುದ್ದೆ, ಫುಡ್ ಕ್ಯಾಟಗೇರಿಜೇಷನ್ ಸಿಸ್ಟಮ್​ನ ಸೀನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಪರೀಕ್ಷೆ ನಡೆಯುತ್ತಿದ್ದು ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್​ಸಿ ಪರೀಕ್ಷೆ ಬರೆದಿದ್ದಾರೆ.

    ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದವ ಅರೆಸ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts