ಮೊಹುವಾ ಜೊತೆ ಹೆಜ್ಜೆ ಹಾಕಿದ ದೀದಿ!

mamatha
Published on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರದ ಭಾಗವಾಗಿ ಹೆಜ್ಜೆ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಎಕ್ಸ್ ನಲ್ಲಿ ವೈರಲ್ ಆಗಿದೆ.

ನಾಡಿಯಾ ಜಿಲ್ಲೆಯ ತಿಹಟ್ಟಾದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಮೊಹುವಾ ಮೊಯಿತ್ರಾ ಪರ ಸಿಎಂ ಮಮತಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮೋದಿಯವರ ಆಡಳಿತದಲ್ಲಿ ದೇಶದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಟೀಕಿಸಿದರು. ಏಕರೂಪ ನಾಗರಿಕ ಸಂಹಿತೆ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಕ್ಕುಗಳು ಅಪಾಯಕ್ಕೆ ಸಿಲುಕಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ನಂತರ, ಸಿಎಂ ಮಮತಾ ಬ್ಯಾನರ್ಜಿ ಸ್ಥಳೀಯ ಮಹಿಳೆಯರು ಮತ್ತು ಪಕ್ಷದ ಅಭ್ಯರ್ಥಿ ಮೊಹುವಾ ಮೊಯಿತ್ರಾ ಅವರೊಂದಿಗೆ ನೃತ್ಯ ಮಾಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮೊಹುವಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ಮುಖ್ಯಮಂತ್ರಿಗೆ ಕೃತಜ್ಞತೆ ಸಲ್ಲಿಸಿದರು.

ಸಿಎಂ ಮಮತಾ ಬ್ಯಾನರ್ಜಿ ಕಳೆದ ವಾರ ಮಾಲ್ಡಾದಲ್ಲಿ ಸ್ಥಳೀಯ ಮಹಿಳೆಯರೊಂದಿಗೆ ಬಂಗಾಳಿ ಜಾನಪದ ಗೀತೆಗಳಿಗೆ ನೃತ್ಯ ಮಾಡಿದ್ದರು. ಮೊಹುವಾ ಅವರು ಕೃಷ್ಣನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲೂ ಉಡುಗೊರೆ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸಂಸತ್ತಿನಲ್ಲಿ ನೀತಿಸಂಹಿತೆ ಸಮಿತಿ ವಿಚಾರಣೆ ನಡೆಸಿದ ಬಳಿಕ ಆಕೆಯನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net