More

    ‘I.N.D.I.A’ ಕೂಟದಿಂದ ಹೊರಬಂದ ಮಮತಾ: ‘ಕೈ’ಗೆ ಬಿಗ್ ಶಾಕ್​ ​​​-ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಹೋರಾಟ!

    ಕೋಲ್ಕತ್ತಾ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

    ಇದನ್ನೂ ಓದಿ: ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕುರಿತು ಕೋರ್ಟ್​ ಹೇಳಿದ್ದೇನು? ಯಾರ ಪಾಲಾಯ್ತು?

    ಬಂಗಾಳದಲ್ಲಿ ಸೀಟು ಹೊಂದಾಣಿಕೆ ಕುರಿತು ಕಾಂಗ್ರೆಸ್ ಜೊತೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಹೇಳಿದ್ದಾರೆ. ಫಲಿತಾಂಶದ ನಂತರವೇ ಮೈತ್ರಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೀದಿ ಬಹಿರಂಗಪಡಿಸಿದ್ದಾರೆ.

    ”ಬಂಗಾಳಕ್ಕೆ ಸೀಟು ಹಂಚಿಕೊಳ್ಳುವ ಬಗ್ಗೆ ನಮ್ಮ ಪಕ್ಷವು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿಲ್ಲ. ಈ ವಿಚಾರವಾಗಿ ನಾವು ಇದುವರೆಗೆ ಪಕ್ಷದ ಯಾರೊಂದಿಗೂ ಮಾತನಾಡಿಲ್ಲ. ನಮ್ಮ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ಚುನಾವಣೆ ನಂತರ ಅಖಿಲ ಭಾರತ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ,’ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.
    ಇದರೊಂದಿಗೆ ‘I.N.D.I.A’ ಮೈತ್ರಿ ಕೂಟದಲ್ಲಿ ದೊಡ್ಡ ಬಿರುಕು ಮೂಡಿದ್ದು, ಚುನಾವಣೆಗೂ ಮುನ್ನವೇ ಮೈತ್ರಿ ಮುರಿದು ಬೀಳುವಂತಾಗಿದೆ.

    ಹೊಸವರ್ಷದಲ್ಲಿ ಶೇ. 50ಕ್ಕಿಂತ ಹೆಚ್ಚು ಲಾಭ ಗಳಿಸಿದ ಷೇರುಗಳು! ವಿವರ ಇಲ್ಲಿದೆ..

    po

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts