ಕೈ ಕೊಟ್ಟ ನಾಯಕನ ವಿರುದ್ಧವೇ ಸ್ಪರ್ಧೆಗೆ ನಿಲ್ಲುತ್ತಾರಂತೆ ದೀದಿ! ಬಿಜೆಪಿ 51 ಸೀಟು ಗೆಲ್ಲುತ್ತೆ ಎಂದು ಭವಿಷ್ಯ

mamtha
Published on

ಕೋಲ್ಕತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ನಾಲ್ಕು ತಿಂಗಳು ಬಾಕಿಯಿವೆ. ಈಗಾಗಲೇ ಎಲ್ಲ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ಈ ಮಧ್ಯೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸುವೇಂದು ಅಧಿಕಾರಿ ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿದ್ದಾರೆ. ಇದೀಗ ಸುವೇಂದು ಅವರ ಕ್ಷೇತ್ರದಿಂದ ಸುವೇಂದುಗೆ ವಿರುದ್ಧವಾಗಿ ನಾನೇ ಕಣಕ್ಕಿಳಿಯುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸುವೇಂದು ಅಧಿಕಾರಿ ನಂದಿಗ್ರಾಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರು ಅದೇ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆಗೆ ನಿಲ್ಲುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸಲಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಂದಿಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಅವರು, "ಬಿಜೆಪಿ ರಾಜ್ಯದಲ್ಲಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದಾಗಿ ಹೇಳಿಕೊಂಡಿದೆ. ಆದರೆ ಅದು ಕೇವಲ 51 ಸ್ಥಾನ ಗೆಲ್ಲಲಿದೆ. ನಾವು 211 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದೇವೆ" ಎಂದು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net