More

    ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ಪ್ರಧಾನಿ ಮೋದಿ ವಿಫಲ…ಅಬ್ಬರದಿಂದ ಏನೂ ಆಗೋಲ್ಲ: ದೀದಿ ಆಕ್ರೋಶ

    ಕೋಲ್ಕತ್ತ: ಹತ್ರಾಸ್​ ಸಾಮೂಹಿಕ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
    ಟ್ವೀಟ್​ ಮೂಲಕ ಮೃತ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಿದ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ಎಂಬುದು ಒಂದು ತಮಾಷೆಯ ವಿಚಾರವಾಗಿದೆ. ಬಿಜೆಪಿ ಸರ್ಕಾರದಿಂದಾಗಿ ಪ್ರತಿಯೊಬ್ಬ ದಲಿತನ ಜೀವನವೂ ಅಪಾಯದಲ್ಲಿಯೇ ಇರುವಂತಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕ್: ಇಬ್ಬರು ಭಾರತೀಯ ಯೋಧರು ಹುತಾತ್ಮ

    ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಯೋಗಿ ಆದಿತ್ಯನಾಥ್​ ಸರ್ಕಾರದಿಂದ ಸಾಧ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ, ನೀವು ನಮ್ಮ ದೇಶದ ಹೆಣ್ಣುಮಕ್ಕಳ ರಕ್ಷಣೆಯಲ್ಲಿ ವಿಫಲರಾಗಿದ್ದೀರಿ. ನಮಗೆ ಭವಿಷ್ಯದ ಬಗ್ಗೆ ತುಂಬ ಚಿಂತೆಯಾಗುತ್ತಿದೆ. ನಿಮ್ಮ ಅಬ್ಬರದಿಂದ ಇನ್ನುಮುಂದೆ ಈ ದೇಶದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವೇ ಇಲ್ಲ ಎಂದು ದೀದಿ ಹೇಳಿದ್ದಾರೆ.

    ಹತ್ರಾಸ್​​ನಲ್ಲಿ ದಲಿತ ಯುವತಿಯ ಮೇಲೆ ನಡೆದ ಕ್ರೂರ, ನಾಚಿಕೆಗೇಡಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಲು ಪದಗಳೇ ಇಲ್ಲ. ಅದರಲ್ಲೂ ಕುಟುಂಬದವರನ್ನು ಹೊರಗಿಟ್ಟು, ಬಲವಂತವಾಗಿ ಅಂತ್ಯಕ್ರಿಯೆ ಮಾಡಿದ್ದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.(ಏಜೆನ್ಸೀಸ್​)

    ನನ್ನನ್ನು ತಳ್ಳಿದರು, ನೆಲಕ್ಕೆ ಬೀಳಿಸಿದರು- ಪೊಲೀಸರ ವಿರುದ್ಧ ರಾಹುಲ್​ ಗಾಂಧಿ ಗುಡುಗು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts