18 C
Bangalore
Thursday, December 5, 2019

ಓರ್ವ ಯುವಕ, ಎತ್ತು ಸಾವು

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯವಾಣಿ ಸುದ್ದಿಜಾಲ ಅಕ್ಕಿಆಲೂರ

ಹೋರಿ ಬೆದರಿಸುವ ಅಖಾಡದಲ್ಲಿ ಹೋರಿ ತಿವಿದು ಅದರ ಮಾಲೀಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನರೇಗಲ್ಲ ಗ್ರಾಮದಲ್ಲಿ ಗುರುವಾರ ನಡೆದಿದೆ.

ವರ್ದಿ ಗ್ರಾಮದ ಸುನೀಲ ಪುಟ್ಟಪ್ಪ ಹಂಚಿನಮನಿ (24) ಮೃತ ದುರ್ದೈವಿ. ಹಟ್ಟಿಹಬ್ಬದ ಹಿನ್ನೆಲೆಯಲ್ಲಿ ರೈತರು ಪ್ರತಿವರ್ಷದಂತೆ ಹೋರಿಗಳನ್ನು ಶೃಂಗರಿಸಿ, ಅದರ ತಾಕತ್ತು ಪ್ರದರ್ಶಿಸಲು ಅಖಾಡದಲ್ಲಿ ಬಿಡುತ್ತಾರೆ. ಅದರಂತೆ ಯುವಕ ಸುನೀಲ ತನ್ನ ಹೋರಿಯನ್ನು ಅಖಾಡದಲ್ಲಿ ಬಿಟ್ಟಿದ್ದಾನೆ. ಆದರೆ, ದುರ್ದೈವವಶಾತ್ ಹೋರಿ ತನ್ನ ಮಾಲೀಕನಿಗೇ ಕೊಂಬಿನಿಂದ ತಿವಿದಿದೆ. ತೀವ್ರ ಅಸ್ವಸ್ಥನಾದ ಸುನೀಲನನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೊನೆಯುಸಿ ರೆಳೆದಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋರಿಯೊಂದಿಗೆ ತೆಗೆದುಕೊಂಡಿದ್ದ ಸೆಲ್ಪಿ: ಸುನೀಲ ಹಂಚಿನಮನಿ ಹಬ್ಬಕ್ಕಾಗಿ ತನ್ನ ಹೋರಿಯ ಮೈ ತೊಳೆದು ಬಲೂನು, ವಿವಿಧ ಅಲಂಕಾರಿಕ ವಸ್ತುಗಳಿಂದ ಅದನ್ನು ಶೃಂಗರಿಸಿದ್ದ, ನಂತರ ಅದನ್ನು ಪೂಜಿಸಿದ ಅದರೊಂದಿಗೆ ಸೆಲ್ಪೀ ಕೂಡ ತೆಗೆದುಕೊಂಡು ಸಂಭ್ರಮಿಸಿದ್ದ. ಇನ್ನೇನು ಸ್ಪರ್ಧೆಯಲ್ಲಿ ತನ್ನ ಹೋರಿ ಪ್ರದರ್ಶಿಸಿ ಭಲೇ ಎನಿಸಿಕೊಳ್ಳಬೇಕು ಎಂಬ ಹುಮ್ಮಸ್ಸಿನಲ್ಲಿದ್ದ ಯುವಕನ ಅಂತ್ಯ ಆ ಹೋರಿಯಿಂದಲೇ ಆಗಿದ್ದು ಕುಟುಂಬ ಸದಸ್ಯರು ಹಾಗೂ ಸೇರಿದ್ದ ಜನರ ಮನ ಕಲಕುವಂತೆ ಮಾಡಿತು.

ಅಸುನೀಗಿದ ಹೋರಿ: ಅಕ್ಕಿಆಲೂರ ಪಟ್ಟಣದಲ್ಲಿ ಹಟ್ಟಿಹಬ್ಬದ ಪ್ರಯುಕ್ತ ಪಟ್ಟಣದ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿಯೊಂದು ಮೃತೊಟ್ಟಿದೆ. ಯುವಕರ ತಂಡ ಹೋರಿ ಬೆದರಿಸಲು ಸನ್ನದ್ಧರಾಗಿದ್ದ ವೇಳೆ ಸ್ಥಳೀಯ ಹಳೂರ ಓಣಿಯ ಚಂದ್ರು ಸಾಲಿಮಠ ಎಂಬ ಯುವಕನ ಹೋರಿ(ವೀರಕೇಸರಿ)ಯನ್ನು ಅಖಾಡದಲ್ಲಿ ಬಿಡಲಾಗಿದೆ. ದುರ್ದೈವವಶಾತ್ ಹೋರಿ ಅಖಾಡ ಪ್ರವೇಶಿಸುತ್ತಿದ್ದಂತೆ ಕುಸಿದು ಬಿದ್ದು ಪ್ರಾಣವನ್ನೇ ಬಿಟ್ಟಿತ್ತು. ಇದರಿಂದ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ಬೇಸರ ತರಿಸಿತು. ಮೃತಪಟ್ಟ ಹೋರಿಯನ್ನು ಪಟ್ಟಣದ ಜನತೆ ಮೆರವಣಿಗೆ ಮಾಡಿ ಅಂತ್ಯಸಂಸ್ಕಾರ ನೆರವೇರಿಸಿದರು.

ಹೋರಿ ಬೆದರಿಸುವ ಸ್ಪರ್ಧೆಗೆ ಬಲಿಯಾದವರು: ಜಿಲ್ಲೆಯಲ್ಲಿ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಗೆ ಈಗಾಗಲೇ ಅನೇಕರು ಜೀವ ಕಳೆದುಕೊಂಡಿದ್ದಾರೆ. ಇತ್ತೀಚಿನ ಐದು ವರ್ಷಗಳ ಅವಧಿಯಲ್ಲಿ 8 ಜನ ಹೋರಿ ತಿವಿತದಿಂದ ಮೃತಪಟ್ಟಿದ್ದಾರೆ. ಆದರೆ, ಈ ಸ್ಪರ್ಧೆಗೆ ಅಧಿಕೃತವಾಗಿ ಪರವಾನಗಿ ಇಲ್ಲದ ಕಾರಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಹೋರಿ ಸ್ಪರ್ಧೆಯ ಬದಲು ಬೇರೆ ಕಾರಣಗಳ ಪ್ರಕರಣ ದಾಖಲಾಗುತ್ತಿವೆ. ಹೋರಿ ಬೆದರಿಸುವ ಸ್ಪರ್ಧೆಗಳು ದೀಪಾವಳಿ ಪಾಡ್ಯದಿಂದ ಆರಂಭಗೊಂಡಿದ್ದು, ಜನವರಿವರೆಗೂ ಅಲ್ಲಲ್ಲಿ ನಡೆಯುತ್ತವೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...