ಶಿವಮೊಗ್ಗ: (Shivamogga) ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ಬೀದಿ ನಾಯಿ ಎಳೆದೊಯ್ದ ಸುದ್ದಿಯೊಂದು ರಾಜ್ಯಾದ್ಯಂತ ಸುದ್ದಿಯಾಗಿದ್ದು ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಂಚನಾಲ ಗ್ರಾಮದ ಆಟೋ ಚಾಲಕ ವಾಜೀದ್ ಬಂಧಿತ. ಈತನನ್ನು ಕೆಂಚನಾಲ ರೈಲ್ವೆ ನಿಲ್ದಾಣದ ಬಳಿಯಲ್ಲಿ ಬೀದಿ ನಾಯಿಯನ್ನು ಅಮಾನುಷವಾಗಿ ಹೊಡೆದು ಸಾಯಿಸಿ ಆಟೋದಲ್ಲಿ ಎಳೆದುಕೊಂಡು ಹೋದ ಆರೋಪದಡಿ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.
ಕೆಂಚನಾಲ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅದರಷ್ಟಕ್ಕೆ ಮಲಗಿದ್ದ ನಾಯಿಯ ಮೇಲೆ ಆರೋಪಿ ವಾಜೀದ್ ದೊಡ್ಡ ಗಾತ್ರದ ಕಲ್ಲು ಎತ್ತಿ ಹಾಕಿ ಕೊಂದಿದ್ದಾನೆ. ಬಳಿಕ ಲಗ್ಗೇಜ್ ಆಟೋಗೆ ಕಟ್ಟಿ ಎಳೆದೊಯ್ದ ವಿಡಿಯೋ ವೈರಲ್ ಆಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವೆ, ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಎಂಟ್ರಿಯಾಗಿದ್ದು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ.
TAGGED:Shivamogga