ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನ ಬಂಧನ

blank

ಶ್ರೀರಂಗಪಟ್ಟಣ: ಅಪ್ರಾಪ್ತೆಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ವಿವಾಹಿತ ಹಾಗೂ ಆತನಿಗೆ ಸಹಕಾರ ನೀಡಿದ್ದ ಇಬ್ಬರು ಯುವಕರನ್ನು ಅರಕರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ನೇರಳೆಕೆರೆ ಗ್ರಾಮದಲ್ಲಿ ಭಾನುವಾರ ಘಟನೆ ನಡೆದಿದ್ದು, ಬಾಲಕಿಯೊಂದಿಗೆ ನಾಪತ್ತೆಯಾಗಿದ್ದ ಗ್ರಾಮದ ಸಿದ್ದಯ್ಯ ಎಂಬುವರ ಪುತ್ರ ಆರೋಪಿ ವೆಂಕಟೇಶ್(36) ಎಂಬಾತನನ್ನು ಒಂದೇ ದಿನದಲ್ಲಿ ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯೊಂದಿಗೆ ಪರಾರಿಯಾಗಲು ಈತನಿಗೆ ಹಣ ಹಾಗೂ ಆಹಾರದ ವ್ಯವಸ್ಥೆ ಕಲ್ಪಿಸಿ ಸಹಾಯ ಮಾಡಿದ್ದ ಅದೇ ಗ್ರಾಮದ ಯುವಕರಾದ ಸಚಿನ್(27) ಮತ್ತು ಕಾರ್ತಿಕ್(26) ಸೇರಿದಂತೆ ಮೂವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ವೆಂಕಟೇಶ್ ವಿವಾಹಿತನಾಗಿದ್ದು, ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ. ಅಪ್ತಾಪ್ತೆಗೆ ಪ್ರೇಮದ ತಲೆಕಡಿಸಿ ಆಕೆಯನ್ನು ಅಪಹರಣ ಮಾಡಿ ತೋಟವೊಂದರಲ್ಲಿ ಅತ್ಯಾಚಾರಗೈದು ಬಳಿಕ ಆಕೆಯೊಂದಿಗೆ ನಾಪತ್ತೆಯಾಗಿದ್ದ. ಘಟನೆಯಿಂದ ಆತಂಕಕ್ಕೆ ಒಳಗಾದ ಪಾಲಕರು ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನಿರ್ದೇಶನದಂತೆ ಹೆಚ್ಚುವರಿ ಎಸ್ಪಿಗಳಾದ ತಿಮ್ಮಯ್ಯ, ಗಂಗಾಧರಸ್ವಾಮಿ ಹಾಗೂ ಡಿವೈಎಸ್ಪಿ ಎಚ್.ಎಸ್.ಮುರುಳಿ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಎಂ.ಪುನೀತ್ ಅವರ ನೇತೃತ್ವದಲ್ಲಿ ಪಿಎಸ್‌ಐ ವಿನೋದ್‌ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಾಲಕಿ ಸಮೇತ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ, ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿದೆ.

 

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…