

Odisha| ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ದೂರದ ಸಂಬಂಧಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದು, ನಿರ್ಮಾಣ ಹಂತದ ಮನೆಯಲ್ಲಿ ಹುಡುಗಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ, ತಮ್ಮ ಗ್ರಾಮದಲ್ಲಿ ನಡೆಯುವ ಹಬ್ಬಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ. ಆದರೆ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಕುತ್ತಿಗೆ ಹಿಸುಕಿ ಕೊಂದು, ನಂತರ ಶವವನ್ನು ಎಸೆದಿದ್ದ, ಎಂದು ಎಸ್ಪಿ ಹೇಳಿದ್ದಾರೆ. ನಾಪತ್ತೆ ದೂರು ದಾಖಲಾದ ನಂತರ, ಪೊಲೀಸರು ತನಿಖೆ ಆರಂಭಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ವಿಧಿವಿಜ್ಞಾನ ತಂಡ ಮತ್ತು ಶ್ವಾನ ದಳವು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಪುರಾವೆಗಳನ್ನು ಸಂಗ್ರಹಿಸಿದೆ.
ಶುಕ್ರವಾರ ಸಂಜೆ ಮಗು ಕಾಣೆಯಾಗಿರುವುದಾಗಿ ಪೋಷಕರು ದೂರು ನೀಡಿದ್ದರು. ಆ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ, 2012 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಅನುಮಾನದ ಆಧಾರದ ಮೇಲೆ ಆರೋಪಿ ಸೇರಿದಂತೆ ಹಲವರನ್ನು ವಿಚಾರಣೆಗೆ ಕರೆಯಲಾಗಿತ್ತು. ಮತ್ತು ಸ್ಥಳೀಯರು ಹೇಳುವಂತೆ ಆತ ಆಗಾಗ ಬಾಲಕಿಗೆ ಚಿಪ್ಸ್ ಮತ್ತು ಚಾಕೊಲೇಟ್ ಕೊಡುತ್ತಿದ್ದ ಎಂದು ಎಸ್ಪಿ ತಿಳಿಸಿದ್ದಾರೆ.
(ಏಜೆನ್ಸೀಸ್)
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಕೆಸಿಜಿ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ. ಶವಪರೀಕ್ಷೆಯ ವರದಿ ಬಂದ ಬಳಿಕವೇ ಸಾವಿಗೆ ನಿಖರವಾದ ಕಾರಣ ಏನೆಂಬುದು ತಿಳಿದುಬರಲಿದೆ.
ಆರೋಪಿ ಏಪ್ರಿಲ್ 25 ರಂದು ಸಂಜೆ ಮದ್ಯದ ಅಮಲಿನಲ್ಲಿದ್ದ, ಆಕೆಯನ್ನು ಕರೆದುಕೊಂಡು ಹೋಗುವ ಮೊದಲು ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿದ್ದ. ಮೃತ ದೇಹವನ್ನು ಎಸೆದ ನಂತರ ಅವನು ಮತ್ತೆ ಮದ್ಯ ಸೇವಿಸಿದ್ದ ಎನ್ನುವ ಮಾಹಿತಿ ಬಹಿರಂಗವಾಗಿದೆ.