ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಪೈಶಾಚಿಕ ಕೃತ್ಯ ಮೆರೆದ ಆರೋಪಿ ಬಂಧನ

Man Arrest
Published on

ಕೊಚ್ಚಿ: ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಹಸುವಿನ ಮೇಲೆ ಲೈಂಗಿನ ದೌರ್ಜನ್ಯ ನಡೆಸಿದ್ದಾನೆ. ಸದ್ಯ ಪೈಶಾಚಿಕ ಕೃತ್ಯ ನಡೆಸಿದ ಆರೋಪಿ ಮಣಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಚಡಯಮಂಗಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ಆದಿತ್ಯವಾರ (ಜ.1) ಮಧ್ಯರಾತ್ರಿ ಸುಮಾರು 1 ಗಂಟೆಯ ವೇಳೆಗೆ ಆರೋಪಿ ಮಣಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ತನ್ನ ಮನೆಯ ಹತ್ತಿರದಲ್ಲಿದ್ದ ದನದ ಹಟ್ಟಿಗೆ ತೆರಳಿ ಅಲ್ಲಿ ಪೈಶಾಷಿಕ ಕೃತ್ಯ ನಡೆಸಿದ್ದ. ಈ ವೇಳೆ ಹಸುವಿನ ಕೂಗು ಕೇಳುತ್ತಿದ್ದಂತೆ ಎಚ್ಚೆತ್ತ ತೋಟದ ಕೆಲಸಗಾರ ಬಂದು ಹಟ್ಟಿಯತ್ತು ಧಾವಿಸಿದ್ದಾನೆ. ಈ ವೇಳೆ ಆರೋಪಿ ಮಣಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ತೋಟದ ಕೆಲಸಗಾರ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಚಡಯಮಂಗಲಂ ಠಾಣಾ ಪೊಲೀಸರು ಘಟನಾ ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಆರೋಪಿ ಮಣಿಯ ಓಡಾಟ ಸೆರೆಯಾಗಿದೆ. ಕೂಡಲೇ ಪೊಲೀಸರು ಆರೋಪಿ ಮಣಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಅರೋಪಿ ಮಣಿಯ ವಿರುದ್ಧ ಈ ಹಿಂದೆಯೂ ಕೆಲವು ಪ್ರಕರಣ ದಾಖಲಾಗಿತ್ತು. ಸಾಕು ಪ್ರಾಣಿಗಳನ್ನು ಅಮಾನುಷವಾಗಿ ಹಿಂಸಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು ಎಂದು ವರದಿಯಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net