More

    6 ಸಾವಿರ ರೂ. ಲಂಚ ಪಡೆಯುವಾಗ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಲೋಕಾ ಬಲೆಗೆ

    ಕೋಲಾರ: ಲಂಚ ಪಡೆಯುವ ವೇಳೆ ಇಲ್ಲೊಬ್ಬರು ಗೃಹರಕ್ಷಕ ದಳದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಿಗೆ ಬಿದ್ದಿದ್ದಾರೆ. ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್​ 6000 ರೂಪಾಯಿ ಲಂಚ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

    ಇದನ್ನೂ ಓದಿ: ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದಾಗ ಸಿಕ್ತು ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ!

    ಸುಬಾನಾಯಕ್​ ಎಂಬುವವರ ಬಳಿ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್, ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿ ಕೊಡಲು 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅವರು ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್​ ನೇತೃತ್ವದ ತಂಡ ಬಲೆ ಬೀಸಿದ್ದು ರಾಜೇಂದ್ರನ್ ಸಿಕ್ಕಿ ಬಿದ್ದಿದ್ದಾರೆ. 

    ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಗ್ರಾಪಂ ಕಾರ್ಯದರ್ಶಿ: ಖಾತೆ ಮಾಡಿಕೊಡಲು ಲಂಚ ಸ್ವೀಕಾರ ಆರೋಪ

    ಸದ್ಯ ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts