More

    ಕರೊನಾ ವಾರ್ಡ್​ನಲ್ಲಿ ಜೋರಾಗಿ ಮಾತನಾಡಬೇಡ ಎಂದಿದ್ದಕ್ಕೆ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ!

    ಮುಂಬೈ: ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ರೋಗಿಗಳಿಗೆ ಚಿಕಿತ್ಸೆ ಕೊಡುವುದಕ್ಕೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಕರ್ತವ್ಯನಿರತ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ದುಷ್ಕೃತ್ಯ ಮೆರೆದಿದ್ದಾನೆ.

    ಮಹಾರಾಷ್ಟ್ರದ ನಾಂದೇಡ್​ ಜಿಲ್ಲಾಸ್ಪತ್ರೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಭೌಸಾಹೇಬ್​ ಗಾಯ್ಕವಾಡ್​ ಹೆಸರಿನ ವ್ಯಕ್ತಿಯ ಸಂಬಂಧಿಯೊಬ್ಬರಿಗೆ ಕರೊನಾ ಸೋಂಕು ದೃಢವಾಗಿದ್ದು, ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಮಾತನಾಡಿಸುವ ನಿಟ್ಟಿನಲ್ಲಿ ಭೌಸಾಹೇಬ್​ ಏಪ್ರಿಲ್​ 20ರಂದು ಆಸ್ಪತ್ರೆಗೆ ಬಂದಿದ್ದಾನೆ. ಅಲ್ಲಿ ರೋಗಿಯೊಂದಿಗೆ ಜೋರಾಗಿ ಮಾತನಾಡಲಾರಂಭಿಸಿದ್ದಾನೆ. ಈ ಸಮಯದಲ್ಲಿ ಇತರ ರೋಗಿಗಳನ್ನು ಭೇಟಿ ಮಾಡಲು ಅವರ ಸಂಬಂಧಿಗಳು ಬಂದಿದ್ದು, ಇವರ ಜೋರಾದ ಮಾತಿನಿಂದಾಗಿ ಅವರಿಗೆ ತೊಂದರೆಯಾಗಿದೆ. ಸಣ್ಣ ಮಾತನಾಡುವಂತೆ ಅವರಲ್ಲಿ ಮನವಿ ಮಾಡಿದ್ದಾರೆ. ಆದರೆ ಅದಕ್ಕೆ ಸಿಟ್ಟಿಗೆದ್ದ ಭೌಸಾಹೇಬ್​ ಅವರೊಂದಿಗೆ ಜಗಳಕ್ಕೆ ಇಳಿದಿದ್ದಾನೆ.

    ಕೋವಿಡ್​ ವಾರ್ಡ್​ನಲ್ಲಿ ಜಗಳ ಹೆಚ್ಚಾದ ಹಿನ್ನೆಲೆಯಲ್ಲಿ ವೈದ್ಯರೊಬ್ಬರು ಮಧ್ಯಪ್ರವೇಶಿಸಿದ್ದಾರೆ. ಆಗ ಭೌಸಾಹೇಬ್​ ವೈದ್ಯರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ವೈದ್ಯರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ವಿಚಾರವಾಗಿ ಅವರು ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್​)

    ಟಿಕ್​ಟಾಕ್​ ಸ್ಟಾರ್​ ಫನ್​ ಬಕೆಟ್​ ಭಾರ್ಗವನ ಬಗ್ಗೆ ಶಾಕಿಂಗ್​ ಸಂಗತಿಗಳನ್ನು ಬಿಚ್ಚಿಟ್ಟ ಯುವತಿ..!

    ಕ್ರೀಡಾ ಪಟುಗಳಿಗೆ ಭರ್ಜರಿ ಅವಕಾಶ‌: ಸ್ಪೋರ್ಟ್ಸ್​ ಅಥಾರಿಟಿ ಆಫ್‌ ಇಂಡಿಯಾದಲ್ಲಿ 220 ಹುದ್ದೆಗಳಿಗೆ ಆಹ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts