ವಯನಾಡಿನಲ್ಲಿ ಗುಡ್ಡ ಕುಸಿತ: ಬಂಡೆ ಹಿಡಿದು ವ್ಯಕ್ತಿಯ ಜೀವನ್ಮರಣ ಹೋರಾಟ

kerala
Published on

ವಯನಾಡ್​: ಕೇರಳದ ವಯನಾಡಿನ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ 104 ಆಗಿದೆ. ಇಲ್ಲಿವರೆಗೆ 34 ಮೃತದೇಹಗಳ ಗುರುತು ಪತ್ತೆಯಾಗಿದ್ದು, ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ಪ್ರವಾಹದಲ್ಲಿ ಕೊಚ್ಚಿಹೋಗದಂತೆ ವ್ಯಕ್ತಿಯೊಬ್ಬರು ಬಂಡೆಯೊಂದನ್ನು ಗಟ್ಟಿಯಾಗಿ ಹಿಡಿದು ಹೋರಾಟ ನಡೆಸಿದ್ದಾರೆ.

ಈ ಆಪತ್ತಿನಿಂದ ಬಚಾವಾಗಲು ವ್ಯಕ್ತಿಯೊಬ್ಬರು ಇನ್ನಿಲ್ಲದ ಹೋರಾಟ ನಡೆಸುವುದನ್ನು ಕಂಡ ಜನ, ಪ್ರವಾಹ ಮತ್ತು ಭೂ ಕುಸಿತದಿಂದ ಸ್ಥಳೀಯರು ಅಸಹಾಯಕರಾಗಿ ವೀಕ್ಷಿಸಬೇಕಾಯಿತು. ಆದರೆ ಆ ವ್ಯಕ್ತಿಯನ್ನು ರಕ್ಷಿಸಲು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇಲ್ಲಿನ ಮುಂಡಕೈ ಗ್ರಾಮದಲ್ಲಿ ಈ ಘಟನೆ ಸಂಭವಸಿದೆ. ಈ ಆಪತ್ತಿನಿಂದ ಪಾರಾಗಲು ವ್ಯಕ್ತಿಯ ಜೀವನ್ಮರಣ ಹೋರಾಟವನ್ನು ಸ್ಥಳೀಯರೊಬ್ಬರು ಚಿತ್ರೀಕರಿಸಿದ್ದು, ಸ್ಥಳೀಯ ಟಿ.ವಿ ಚಾನಲ್​ವೊಂದರಲ್ಲಿ ಪ್ರಸಾರವಾಗಿದೆ.

"ವ್ಯಕ್ತಿಯು ಮುಂಡಕೈ ಶಾಲೆಯ ಸಮೀಪಬಂಡೆಯನ್ನು ಹಿಡಿದು ಅಂಗಲಾಚುವುದು. ಬೆಳಿಗ್ಗೆ 7:30ರ ವೇಳೆಗೆ ಗೊತ್ತಾಗಿದೆ. ಪ್ರವಾಹದಲ್ಲಿ ಕೊಚ್ಚಿಹೋಗದಂತೆ ಪ್ರಯಾಸಪಡುತ್ತಿದ್ದರು ಎಂದು ಈ ದೃಶ್ಯವನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದ್ದ ಬ್ಲಾಕ್ ಪಂಚಾಯತ್ ಸದಸ್ಯ ರಾಘವನ್ ತಿಳಿಸಿದರು.

ರಕ್ಷಣಾ ತಂಡಗಳು ಕಾರ್ಯಾಚರಣೆ ಚುರುಕುಗೊಳಿಸುತ್ತಿದ್ದಂತೆಯೇ, ಪ್ರವಾಹದಲ್ಲಿ ಕೊಚ್ಚಿಹೋಗದಂತೆ ಜನರು ರಕ್ಷಣೆಗಾಗಿ ಪರಸ್ಪರ ಕೈ ಹಿಡಿದು ಅಲ್ಲಲ್ಲಿ ನಿಂತಿದ್ದ ದೃಶ್ಯಗಳು ಕಂಡು ಬಂದವು.  ರಕ್ಷಣಾ ತಂಡಗಳು ವಯಸ್ಕರು, ಮಹಿಳೆಯರು ಸೇರಿದಂತೆ ಹಲವರನ್ನು ರಕ್ಷಿಸಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ಕಬ್ಬಿಣದ ಸೇತುವೆ ನೆರವಿನಿಂದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net