More

    ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಬಂಧನ

    ದೆಹಲಿ: ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ 48 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಇದನ್ನೂ ಓದಿ: ವಿಮಾನ ಹಾರಾಡುತ್ತಿದ್ದ ವೇಳೆ ದ್ವಾರ ತೆಗೆದು ಹುಚ್ಚಾಟ; ಆರೋಪಿ ಅರೆಸ್ಟ್​

    ಕರೆ ಮಾಡಿದ ಆರೋಪಿಯನ್ನು ದೆಹಲಿಯ ರಾಯಗರ್​ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದೆ. ಬೆದರಿಕೆ ಕರೆ ಬಂದ ತಕ್ಷಣವೇ ತ್ವರಿತವಾಗಿ ಕ್ರಮ ಕೈಗೊಂಡ ಪೊಲೀಸ್​ ಅಧಿಕಾರಿಗಳು, ಪೋನ್​ ಕರೆ ಟ್ರ್ಯಾಕ್​ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts