VIDEO| ಹಾಡಹಗಲೇ ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದುರುಳ

Harassment
Published on

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ಯುವಕನೋರ್ವ ಹಾಡಹಗಲೇ ಅಪ್ರಾಪ್ತ ವಯಸ್ಕಳಿಗೆ ನಡು ರಸ್ತೆಯಲ್ಲೇ ಲೈಂಗಿಕ ದೌರ್ನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕೃತ್ಯ ಎಸಗಿದ ಆರೋಪಿ ರಫಿಕ್​ ಪಠಾಣ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಆರೋಪಿಯೂ ಅಪ್ರಾಪ್ತ ವಯಸ್ಕಳು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಕೆಯನ್ನು ತಡೆದ ರಫಿಕ್​ ಜನನಿಬಿಡ ಪ್ರದೇಶದಲ್ಲಿ ಲೈಂಗಿಕ ದಣರ್ಜನ್ಯ ಎಸಗುತ್ತಾನೆ. ಇದನ್ನು ನೋಡಿದ ಆಕೆಯ ಸ್ನೇಹಿತೆ ಓಡಿ ಹೋಗುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net