More

  ಆಟೋ ಪಲ್ಟಿಯಾಗಿ ವ್ಯಕ್ತಿ ಸಾವು

  ಬಣಕಲ್: ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಆಟೋ ಪಲ್ಟಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಬಾಳೂರು ಹೋಬಳಿಯ ಮಲೆ ಮನೆಯ ರವಿ (28) ಮೃತ ದುರ್ದೈವಿ. ಬಣಕಲ್ ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗಲು ತೆರಳುತ್ತಿದ್ದ ಆಟೋ ಬಣಕಲ್ ಸಮೀಪ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts