

ಹೈದರಾಬಾದ್: ಸಂಭ್ರಮ, ಆಟ ಹೀಗೆ ಕೆಲವು ಸಂದರ್ಭಗಳಲ್ಲಿ ಹೃದಯಾಘಾತದ ಘಟನೆಗಳು ಹೆಚ್ಚುತ್ತಿವೆ. ಇಲ್ಲೊಬ್ಬ ಯುವಕ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ವಿಡಿಯೋ ವೈರಲ್ ಆಗಿದೆ.
ಪರಮೇಶ್ ಯಾದವ್ (39) ಮೃತ. ಇವರು ಮಲ್ಕಾಜ್ಗಿರಿ ಮೂಲದವರಾಗಿದ್ದಾರೆ. ಸಿಕಂದರಾಬಾದ್ನ ಲಾಲಾಪೇಟ್ನ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ ಕ್ರೀಡಾಂಗಣಕ್ಕೆ ಹೋಗಿದ್ದರು. ಮಂಗಳವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.