‘ಸಿದ್ದರಾಮಯ್ಯ ಸಿಎಂ’ ಎಂದು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

siddaramayya
Published on

ಮೈಸೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಅಂತಿಮ ಘಟ್ಟಕ್ಕೆ ಬಂದಿದ್ದು, ಕಾಂಗ್ರೆಸ್​ ಸ್ಪಷ್ಟಬಹುಮತದತ್ತ ದಾಪುಗಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬ ಕೂಗು ಕೇಳಿ ಬಂದಿದ್ದು, 'ಸಿದ್ದರಾಮಯ್ಯ ಸಿಎಂ' ಎಂದು ಟ್ಯಾಟೂ ಹಾಕಿಸಿಕೊಂಡಿರುವ ವ್ಯಕ್ತಿಯೊಬ್ಬನ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮೈಸೂರಿನ ಅಭಿಮಾನಿಯೋರ್ವರು ಸಿದ್ದರಾಮಯ್ಯ ಮೇಲೆ ಇರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ಟ್ಯಾಟೂವಿನ ಮೂಲಕ ತೋರಿಸಿದ್ದಾರೆ. ತಮ್ಮ ಎದೆಯ ಮೇಲೆ 'ಸಿದ್ದರಾಮಯ್ಯ ಸಿಎಂ' ಎಂದು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ, ರಾಜ್ಯದ ಮುಂದಿನ ಸಿಎಂ ಯಾರಾಗಬೇಕು? ಎಂಬ ಪ್ರಶ್ನೆ ಕಾಂಗ್ರೆಸ್​ ಪಕ್ಷದಲ್ಲಿ ಉದ್ಭವವಾಗಿದ್ದು, ರಾಜಕೀಯ ವಲಯದಲ್ಲಿ ಸಿಎಂ ಸ್ಥಾನಕ್ಕಾಗಿ ನಾನಾ ಹೆಸರುಗಳು ಕೇಳಿ ಬರುತ್ತಿವೆ. ಮುಂದಿನ ಸಿಎಂ ಯಾರು ಎಂಬ ತಿರ್ಮಾನವನ್ನು ನಾಳೆ ದೆಹಲಿಯಲ್ಲಿ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿ ತಿರ್ಮಾನಿಸಲಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net