ಸ್ನೇಹಿತರ ದಿನದಂದೇ ಸ್ನೇಹಿತನನ್ನೇ ಕೊಂದ!; ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ

Crime Scene
Published on

ಮಂಡ್ಯ: ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಕೊನೆಗೊಂಡಿದೆ. ಆ ಮೂಲಕ ಸ್ನೇಹಿತರ ದಿನದಂದೇ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣವೊಂದು ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ.

ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಜಯಂತ್ ಎಂಬಾತ ಕೊಲೆಗೀಡಾದ ವ್ಯಕ್ತಿ. ಈತನ ಸ್ನೇಹಿತ ಕೀರ್ತಿ ಕೊಲೆ ಆರೋಪಿ. ಇಂದು ಇವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿತ್ತು. ಅದು ವಿಕೋಪಕ್ಕೆ ತೆರಳಿ ಕೊಲೆಯಲ್ಲಿ ಕೊನೆಗೊಳ್ಳುವ ಮಟ್ಟಕ್ಕೆ ತಲುಪಿದೆ.

ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ ಜಯಂತ್​ಗೆ ಕೀರ್ತಿ ಚಾಕುವಿನಿಂದ ಇರಿದಿದ್ದಾನೆ. ಇರಿತದ ತೀವ್ರತೆಗೆ ಭಾರಿ ರಕ್ತಸ್ರಾವಕ್ಕೀಡಾಗಿ ಜಯಂತ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net