ಕುಟುಂಬದ 8 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ವ್ಯಕ್ತಿ ಆತ್ಮಹತ್ಯೆ

sucide
Published on

ಭೋಪಾಲ್​: ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರ ಸಮೀಪ ನಡೆದಿದೆ.

ಛಿಂದ್ವಾರ ಜಿಲ್ಲೆಯ ಬೊಡಲ್ ಕಚ್ಚರ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅವಿಭಜಿತ ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಆತನ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್ ಜಿರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net