ಮಗು ಆಗಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಚುಚ್ಚಿ ಕೊಂದ ಪತಿ!

Crime Symbolic
Published on

ಮುಂಬೈ: ಮದುವೆಯಾಗಿ ಹಲವು ವರ್ಷಗಳು ಕಳೆದರೂ ಮಗು ಆಗಲಿಲ್ಲ ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಚುಚ್ಚಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಘಟನೆ ಭಾನುವಾರ ಸಂಜೆ ನಡೆದಿದ್ದು ಪ್ರಕರಣ ಸಂಬಂಧ ಆರೋಪಿ ಪತಿ(37 ವರ್ಷ)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ(35 ವರ್ಷ) ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಸ್ಥಳದಲ್ಲೇ ಸಾವು

ಆರ್ಡನೆನ್ಸ್​​ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಬಂಧಿತ ಆರೋಪಿಯೂ ಆಗಾಗ ತನ್ನ ಪತ್ನಿ ಗರ್ಭಿಣಿ ಆಗಲಿಲ್ಲ ಎಂಬ ಕಾರಣಕ್ಕೆ ಜಗಳವಾಡುತ್ತಿದ್ದ. ಭಾನುವಾರ ಇದೇ ವಿಚಾರಕ್ಕೆ ದಂಪತಿಗಳ ನಡುವೆ ಪುನಃ ಗಲಾಟೆಯಾಗಿದ್ದು ಚೂಪಾದ ಆಯುಧದಿಂದ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ತೀವ್ರವಾವಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಘಟನೆಯ ಕುರಿತು ಫ್ಯಾಕ್ಟರಿ ನೌಕರರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net