More

    ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷವೊಡ್ಡಿ 2 ಲಕ್ಷ ರೂ. ವಂಚನೆ!

    ಮುಂಬೈ: ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ಕೊಡಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ 2 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ.

    ಇದನ್ನೂ ಓದಿ: ಸೈಬರ್​ ವಂಚಕನಿಗೆ ತಿರುಗೇಟು ಕೊಟ್ಟಿದ್ದು ಹೀಗೆ..ಮಹಿಳೆ ವೀಡಿಯೋ ವೈರಲ್​
    ಈ ಸಂಬಂಧ ಅಂಬರನಾಥ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಅಂಬರ್‌ನಾಥ್‌ನ ಗೌತಮ್ ನಗರ ಪ್ರದೇಶದ ನಿವಾಸಿಯಾಗಿದ್ದು, ಇಬ್ಬರು ಅಪರಿಚಿತ ವ್ಯಕ್ತಿಗಳು ತಮ್ಮನ್ನು ಫೋನ್ ಮತ್ತು ಇಮೇಲ್‌ಗಳ ಮೂಲಕ ಸಂಪರ್ಕಿಸಿ ಕತಾರ್ ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್ ಹುದ್ದೆಯನ್ನು ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

    “ನೋಂದಣಿ, ದಾಖಲೆ ಪರಿಶೀಲನೆ, ವೀಸಾ ಪ್ರಕ್ರಿಯೆ ಮತ್ತು ವೈದ್ಯಕೀಯ ಪರೀಕ್ಷೆಗೆ ಹಣ ಪಾವತಿಸುವಂತೆ ಆರೋಪಿಗಳು ಕೇಳಿದ್ದು, ಅವರನ್ನು ನಂಬಿದ ಅಂಬರ್​ನಾಥ್​ 2023ರ ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ವಂಚಕರಿಗೆ 2,28,600 ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

    ಬಳಿಕ ಸುಮಾರು ದಿನಗಳಾದರೂ ಉದ್ಯೋಗದ ಬಗ್ಗೆ ಯಾವುದೇ ಮಾಹಿತಿ ಬಾರದ ಕಾರಣ ಸಂತ್ರಸ್ತ ವಂಚಕರಲ್ಲಿ ವಿಚಾರಿಸಿದಾಗ ಅವರು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದ್ದಾರೆ. ಕೊನೆಗೆ ಅಂಬರ್ ನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts