ಮದ್ಯದ ಜತೆ ವಿಷ ಬೆರೆಸಿಕೊಂಡು ಆತ್ಮಹತ್ಯೆ: ಪತ್ನಿಯ ಮನೆಯಲ್ಲೇ ವಾಸವಿದ್ದ ಪತಿ, ಕೌಟುಂಬಿಕ ಕಲಹದಿಂದ ನೊಂದು ಸಾವಿಗೆ ಶರಣು

Anand
Published on

ನೆಲಮಂಗಲ: ಕೌಟುಂಬಿಕ ಕಲಹದಿಂದ ನೊಂದಿದ್ದ ವ್ಯಕ್ತಿಯೊಬ್ಬ ಮದ್ಯದೊಂದಿಗೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದ ಬಳಿ ಈ ಘಟನೆ ನಡೆದಿದೆ.

ಮಾಗಡಿಯ ಸಿಡಿಗನಹಳ್ಳಿ ಮೂಲದ ಆನಂದ್ ಕುಮಾರ್ (39) ಆತ್ಮಹತ್ಯೆ ಮಾಡಿಕೊಂಡಿದ್ದ ವಿವಾಹಿತ. ತೋಟನಹಳ್ಳಿಯ ಹೆಂಡತಿ ಮನೆಯಲ್ಲೇ ವಾಸವಿದ್ದ ಆನಂದ್, ಕೌಟುಂಬಿಕ ಕಲಹದಿಂದ ತೀವ್ರವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಅವರು ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ತ್ಯಾಮಗೊಂಡ್ಲು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net