More

    ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ದಾಳಿಯ ಹೊಣೆಹೊತ್ತು ಪೊಲೀಸರಿಗೆ ಶರಣಾದ ಆರೋಪಿ

    ತಿರುವನಂತಪುರಂ: ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ದಾನೆ.

    ಆರೋಪಿಯು ತ್ರಿಶೂರ್​ ಗ್ರಾಮಾಂತರದ ಕೊಡಕ್ರಾ ಪೊಲೀಸ್​ ಠಾಣೆಗೆ ಶರಣಾಗಿದ್ದು, ಆರೋಪಿಯ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸ್ಪೋಟಕ್ಕೆ IED ಬಳಕೆ: ಡಿಜಿಪಿ

    ಈ ಕುರಿತು ಪ್ರತಿಕ್ತಿಯಿಸಿರುವ ಕೇರಳ ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಜಿತ್ ಕುಮಾರ್, ಘಟನೆಗೆ ಸಂಬಂಧಿಸಿದಂತೆ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ಆತ ಕ್ರಿಶ್ಚಿಯನ್​ ಧಾರ್ಮಿಕ ಗುಂಪಿಗೆ ಸೇರಿದವನು ಎಂದು ಹೇಳಿಕೊಂಡಿದ್ದು, ಆತನ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ತನಿಖೆ ನಡೆಯುತ್ತಿದ್ದು ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, 40ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು, ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts