

ಮಧ್ಯಪ್ರದೇಶ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಬಡ ಕಾರ್ಮಿಕನ ಮೇಲೆ ಮೂತ್ರ ವಿಸರ್ಜಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ಇದೀಗ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬುಡಕಟ್ಟು ಜನಾಂಗದ ಕೂಲಿ ಕಾರ್ಮಿಕನ ಮೇಲೆ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋ ವ್ಯಾಪಕವಾಗಿ ವೈರಲ್ ಆದ ಬೆನ್ನಲ್ಲೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಡಿಯೋವನ್ನು ಗಮನಿಸಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹಾಕಬೇಕು ಎಂದು ಆದೇಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, "ಸಿಧಿ ಜಿಲ್ಲೆಯಲ್ಲಿ ನಡೆದ ಘಟನೆಯ ವೈರಲ್ ವೀಡಿಯೋ ನನ್ನ ಗಮನಕ್ಕೆ ಬಂದಿದೆ. ಅಪರಾಧಿಯನ್ನು ಬಂಧಿಸಲು ಮತ್ತು ಕಠಿಣ ಕ್ರಮ ಕೈಗೊಳ್ಳಲು ಮತ್ತು ಎನ್‌ಎಸ್‌ಎ ವಿಧಿಸಲು ನಾನು ಆಡಳಿತಕ್ಕೆ ಸೂಚನೆ ನೀಡಿದ್ದೇನೆ" ಎಂದು ಬರೆದು ಪೋಸ್ಟ್ ಮಾಡಿದ್ದಾರೆ,(ಏಜೆನ್ಸೀಸ್).