

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮೇಲೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿ ಸಂಭವಿಸಿದೆ.
ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಬೆಳಗ್ಗೆ 8 ಗಂಟೆಯ ಆಸುಪಾಸಿನಲ್ಲಿ ಕಲ್ಲು ತೂರಿದ್ದಾನೆ.
ಕಲ್ಲೆಸದ ವ್ಯಕ್ತಿಯನ್ನು ಇದೀಗ ವಶಕ್ಕೆ ಪಡೆದಿರುವ ಪೊಲೀಸರು, ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಲ್ಲು ತೂರಿದ ವ್ಯಕ್ತಿಯನ್ನು ಸತ್ಯಮೂರ್ತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಎವಿಎಂ ಯಂತ್ರ ಒಡೆದು ಹಾಕಿದ್ದ ಜತೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಫೋಟೊಗೆ ರೌಡಿ ರಾಜೇಂದ್ರ ಎಂದು ಪೋಸ್ಟ್ ಮಾಡಿದ್ದ ಎಂದು ಹೇಳಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.