More

    VIDEO| ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ; ವ್ಯಕ್ತಿ ಅರೆಸ್ಟ್

    ವಾರಾಣಸಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ ದೆಹಲಿಯತ್ತ ವಾಪಸ್​ ತೆರಳುತ್ತಿದ್ದ ವೇಳೆ ಭದ್ರತಾ ಲೋಪವಾಗಿರುವ ಘಟನೆ ಬೆಳಕಿಗೆ ಬಂದಿದೆ.

    ಕಾರ್ಯಕ್ರಮಗಳನ್ನು ಮುಗಿಸಿ ವಾರಾಣಸಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆಯ ವಾಹನದ ಮುಂಭಾಗ ವ್ಯಕ್ತಿಯೊಬ್ಬ ಏಕಾಏಕಿ ಜಿಗಿದಿದ್ದು, ತನಗೆ ಉದ್ಯೋಗ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಆತನನ್ನು ತಕ್ಷಣವೇ ವಶಕ್ಕೆ ಪಡೆದಿದ್ಧಾರೆ.

    ಇದನ್ನೂ ಓದಿ: ಸನಾತನ ಹೇಳಿಕೆ; ಸುಪ್ರೀಂ ಕೋರ್ಟ್​ನಿಂದ ಯಾವುದೇ ನನಗೆ ನೋಟಿಸ್ ಬಂದಿಲ್ಲ: ಉದಯನಿಧಿ ಸ್ಟಾಲಿನ್

    ಘಟನೆ ಸಂಬಂಧ ಪೊಲೀಸರು ಘಾಜಿಪುರ ನಿವಾಸಿ ಕೃಷ್ಣ ಕುಮಾರ್​ ಎಂಬಾತನನ್ನು ವಶಕ್ಕೆ ಪಡೆದಿದ್ದು, ಈತ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಈತ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಘಟನೆ ಕುರಿತು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಘಾಜಿಪುರ ಮೂಲದವರಾದ ಕೃಷ್ಣಕುಮಾರ್​ ಬಿಜೆಪಿಯ ಹಿರಿಯ ಕಾರ್ಯಕರ್ತರು ಎಂದು ತಿಳಿದು ಬಂದಿದೆ. ತುಂಬಾ ವರ್ಷಗಳಿಂದ ಕೆಲಸ ಸಿಗದ ಕಾರಣ ಮಾನಸಿಕ ತೊಂದರೆ ಎದುರಿಸುತ್ತಿದ್ದ ಇವರು ಪ್ರಧಾನಿ ಮೋದಿ ಖುದ್ದು ಭೇಟಿಯಾಗಿ ತಮ್ಮ ಕಷ್ಟಗಹಳನ್ನು ಹೇಳಿಕೊಳ್ಳಲು ಬಯಸಿದ್ದರು. ಅದಕ್ಕಾಗಿ ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವುದಾಗಿ ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

    ರಾಜ್ಯೋತ್ಸವ ರಸಪ್ರಶ್ನೆ - 20

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts