Parliament ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಘಟನೆ ಬಗ್ಗೆ ಪೊಲೀಸರು ಹೇಳಿದ್ದಿಷ್ಟು

Fire Accident
Published on

ನವದೆಹಲಿ: ನೂತನ ಸಂಸತ್​​ ಭವನದ (Parliament) ಎದುರು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ವ್ಯಕ್ತಿಯ ದೇಹ ಬಹುತೇಕ ಸುಟ್ಟಿ ಹೋಗಿದ್ದು, ಸದ್ಯ ಆತನನ್ನು ಚಿಕಿತ್ಸೆಗಾಗಿ ಆರ್​ಎಂಎಲ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಮಾತನಾಡಿರುವ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿಯ ದೇಹ ಶೇ. 90ರಷ್ಟು ಸುಟ್ಟಿ ಹೋಗಿದ್ದು, ಆತನನ್ನು ಉತ್ತರಪ್ರದೇಶದ ಭಾಗ್​ಪತ್​ ಮೂಲದ ಜಿತೇಂದ್ರ ಎಂದು ಗುರುತಿಸಲಾಗಿದೆ.

ವ್ಯಕ್ತಿಯು ಸಂಸತ್ತಿನ (Parliament) ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಬೆಂಕಿ ಹಚ್ಚಿಕೊಂಡು ನಂತರ ಮುಖ್ಯದ್ವಾರದತ್ತ ಹೋಗಿದ್ದಾನೆ. ಕೂಡಲೇ ಇದನ್ನು ಗಮನಿಸಿದ ಪೊಲೀಸರು ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಸಿಟವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net