VIDEO| ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದವನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು

UP Shootout
Published on

ಲಖನೌ: ತನ್ನ ಮಗಳನ್ನು ಭುಜದ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಶಹಜಹನ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಮೊಹಮ್ಮದ್​ ಶೋಯೆಬ್​(28) ಗುಂಡೇಟು ತಿಂದು ಗಂಭಿರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಕಜನಕ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ವಿಪಕ್ಷ ನಾಯಕರು ಕಿಡಿಕಾರುತ್ತಿದ್ದಾರೆ.

ಪ್ರಕರಣದ ಹಿನ್ನಲೆ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಮೊಹಮ್ಮದ್​ ಶೋಯೆಬ್ ತನ್ನ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಗುಂಡು ಹಾರಿಸಿ ಪರಾರಿಯಾಗುತ್ತಾರೆ. ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಶೋಯೆಬ್ ಹಾಗೂ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಹಜಹನ್​ಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಮೀನಾ ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಮೀನಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net