More

    VIDEO| ಮೋಸ ಮಾಡುತ್ತಿದ್ದಾಳೆಂದು ಊಹಿಸಿ ಪ್ರಿಯತಮೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಪ್ರಿಯಕರ

    ಲಖನೌ: ಪ್ರೀತಿ-ಪ್ರೇಮದ ಹೆಸರಿನಲ್ಲಿ ತನ್ನನ್ನು ವಂಚಿಸುತ್ತಿದ್ದಾಳೆ ಎಂದು ಆರೋಪಿಸಿ ಯುವಕನೋರ್ವ ತನ್ನ ಪ್ರೇಯಸಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಲಖೀಂಪುರ್​ ಖೇರಿಯಲ್ಲಿ ನಡೆದಿದೆ.

    ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ಯುವಕ ಇಶು ವರ್ಮಾ ಎಂಬಾತನನ್ನು ವಶಕ್ಕೆ ಪಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕ ಬೆಲ್ಟ್​ನಿಂದ ಯುವತಿಯನ್ನು ಮನಬಂದಂತೆ ಥಳಿಸುತ್ತಿರುವುದು ಕಂಡು ಬರುತ್ತದೆ. ಬಳಿಕ ಆಕೆಯ ಕಪಾಳಕ್ಕೆ ಬಾರಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.

    ಇದನ್ನೂ ಓದಿ: ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ ಆಧಾರ್​ ಕಾರ್ಡ್​ ತಿರುಚಿದ ಆರೋಪ; ಯುವಕ ಅರೆಸ್ಟ್​

    ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಚಂದ್ರಶೇಖರ್​ ಪ್ರೀತಿ-ಪ್ರೇಮದ ಹೆಸರಿನಲ್ಲಿ ತನ್ನ ಪ್ರಿಯತಮೆ ವಂಚಿಸುತ್ತಿದ್ದಾಳೆ ಎಂದು ಊಹಿಸಿ ಇಶು ವರ್ಮಾ ಎಂಬಾತ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿರುವುದನ್ನು ಆತನ ಸ್ನೇಹಿತ ಮೊಬೈಲ್​ ಫೋನಿನಲ್ಲಿ ಸೆರೆ ಹಿಡಿದಿದ್ದಾನೆ.

    ಪ್ರಕರಣ ಸಂಬಂಧ ಆರೋಪಿ ಇಶು ವರ್ಮಾ ಹಾಗೂ ವಿಡಿಯೋವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಿದ ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಗಾಯಾಳು ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಚಂದ್ರಶೇಖರ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts