VIDEO| ಮೋಸ ಮಾಡುತ್ತಿದ್ದಾಳೆಂದು ಊಹಿಸಿ ಪ್ರಿಯತಮೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಪ್ರಿಯಕರ

ಲಖನೌ: ಪ್ರೀತಿ-ಪ್ರೇಮದ ಹೆಸರಿನಲ್ಲಿ ತನ್ನನ್ನು ವಂಚಿಸುತ್ತಿದ್ದಾಳೆ ಎಂದು ಆರೋಪಿಸಿ ಯುವಕನೋರ್ವ ತನ್ನ ಪ್ರೇಯಸಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಲಖೀಂಪುರ್​ ಖೇರಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ಯುವಕ ಇಶು ವರ್ಮಾ ಎಂಬಾತನನ್ನು ವಶಕ್ಕೆ ಪಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕ ಬೆಲ್ಟ್​ನಿಂದ ಯುವತಿಯನ್ನು ಮನಬಂದಂತೆ ಥಳಿಸುತ್ತಿರುವುದು ಕಂಡು ಬರುತ್ತದೆ. ಬಳಿಕ ಆಕೆಯ ಕಪಾಳಕ್ಕೆ ಬಾರಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದ್ದು, … Continue reading VIDEO| ಮೋಸ ಮಾಡುತ್ತಿದ್ದಾಳೆಂದು ಊಹಿಸಿ ಪ್ರಿಯತಮೆಯನ್ನು ಹಿಗ್ಗಾಮುಗ್ಗಾ ಥಳಿಸಿದ ಪ್ರಿಯಕರ