ಪುತ್ರನ ಎದುರೇ ಚಾಕುವಿನಿಂದ ಪತ್ನಿಗೆ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ!

ಮುಂಬೈ: ವ್ಯಕ್ತಿಯೊಬ್ಬ ತನ್ನ ಮಗನ ಮುಂದೆಯೇ ಪತ್ನಿಯನ್ನು ಕೊಂದು ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಮಹಾಬಲೇಶ್ವರ ಬೆಟ್ಟದಲ್ಲಿ ಗುರುವಾರ ನಡೆದಿದೆ.

ಅನಿಲ್‌ ಶಿಂದೆ(34) ಎಂಬಾತ ವೃತ್ತಿಯಲ್ಲಿ ಚಾಲಕನಾಗಿದ್ದ. ಪತ್ನಿ ಸೀಮಾ(30) ಮತ್ತು ತಮ್ಮ 11 ವರ್ಷದ ಪುತ್ರನೊಂದಿಗೆ ಮೂವರು ಬುಧವಾರ ಸತಾರ ಜಿಲ್ಲೆಯ ಮಹಾಬಲೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರು.

ಹೋಟೆಲ್‌ ಕೊಠಡಿಗೆ ತೆರಳಿದ ವೇಳೆ ದಂಪತಿ ನಡುವೆ ಜಗಳ ಉಂಟಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನು ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರುಚಾಟದಿಂದ ನಿದ್ದೆಗೆ ಜಾರಿದ್ದ ಮಗ ಎದ್ದು ನೋಡಿದಾಗ ಶಿಂಧೆ ಪತ್ನಿಗೆ ಚಾಕುವಿನಿಂದ ಇರಿಯುತ್ತಿರುವುದು ಕಂಡಿದೆ. ಎಷ್ಟೇ ಕೇಳಿಕೊಂಡರೂ ಬಿಡದೆ ಇರಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಹೊರಗಡೆ ಬಂದ ಬಾಲಕ ಹೋಟೆಲ್‌ನವರಿಗೆ ಸುದ್ದಿ ಮುಟ್ಟಿಸಿದ್ದಾನೆ.

ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟೊತ್ತಿಗಾಗಲೇ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ಯಾವ ವಿಚಾರಕ್ಕೆ ಜಗಳ ಉಂಟಾಯಿತು ಎನ್ನುವ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ ಎಂದಿದ್ದಾರೆ. (ಏಜೆನ್ಸೀಸ್)