

ನವದೆಹಲಿ: ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬರ್ವಾನಿಯಲ್ಲಿ ನಡೆದಿದೆ.
ಮೃತರನ್ನು ಅಶೋಕ್ ಸೋಲಂಕಿ ಎಂದು ಗುರುತಿಸಲಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜೂನ್ 17ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದೆ.
ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಮೊದಲು ನಿಲ್ಲಿಸಿದ್ದ ಬೈಕ್ ಮತ್ತು ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಸುತ್ತಮುತ್ತಲಿನ ಜನ ಬಂದು ನೋಡಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.