

ಬೆಂಗಳೂರು: ವ್ಯಕ್ತಿಯೋರ್ವ ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆ ವಿಧಾನಸೌಧದ 2ನೇ ಮಹಡಿಯ ಪ್ರವೇಶ ದ್ವಾರದಲ್ಲಿ ನಡೆದಿದೆ.
ನಂದಕುಮಾರ್ (50) ಸ್ಯಾನಿಟೈಸರ್ ಕುಡಿದ ವ್ಯಕ್ತಿ. ಆರ್ಟಿ ನಗರ ಮೂಲದ ಈತ ಮದ್ಯಪಾನ ಮಾಡಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ ಸ್ಯಾನಿಟೈಸರ್ ಕುಡಿದ ನಂದಕುಮಾರ್ 100 ಸಂಖ್ಯೆಗೆ ಕರೆ ಮಾಡಿದ್ದಾನೆ.
ಕೂಡಲೇ ಸ್ಥಳಕ್ಕೆ ಬಂದ ವಿಧಾನಸೌಧ ಪೊಲೀಸರು ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಪಡೆದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ನಂದಕುಮಾರ್ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.