ಹಾವೇರಿಯಲ್ಲಿ ವ್ಯಕ್ತಿಯ ಗುಪ್ತಾಂಗಕ್ಕೆ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಕಿರಾತಕರು!

Police
Published on

ಹಾವೇರಿ: ಮಾರಕಾಸ್ತ್ರಗಳಿಂದ ಅಪರಿಚಿತ ವ್ಯಕ್ತಿಯ ಗುಪ್ತಾಂಗಕ್ಕೆ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪದಲ್ಲಿ ನಡೆದಿದೆ.

ದುಷ್ಕರ್ಮಿಗಳು ಅಪರಿಚಿತನನ್ನು ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ಚಾಪೆ ಹಾಗೂ ರಗ್ಗಿನಲ್ಲಿ ಸುತ್ತಿ ಗೋವಿನ ಜೋಳದ ಜಮೀನಿನಲ್ಲಿ ಎಸೆದಿದ್ದಾರೆ. ಚಂದ್ರಕಾಂತ ಕುಬಿಹಾಳ ಎಂಬುವವರಿಗೆ ಸೇರಿದ ಜಮೀನು ಇದಾಗಿದೆ.

ಘಟನಾ ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಹಳೆ ದ್ವೇಷದಿಂದ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net