More

    ರೈತ ಹೋರಾಟದಲ್ಲಿ ಕಾರಿಗೆ ಬೆಂಕಿ; ಹೋರಾಟಗಾರನ ಸಜೀವ ದಹನ

    ನವದೆಹಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ್ದ ಓರ್ವ ವ್ಯಕ್ತಿ ದಾರುಣ ಮರಣಕ್ಕೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ.

    ಇದನ್ನೂ ಓದಿ: ಜೈಲಿನಲ್ಲಿ ರಾಗಿಣಿ, ಸಂಜನಾ ಏನು ಮಾಡುತ್ತಿದ್ದಾರೆ ಗೊತ್ತಾ? ಮಾದಕ ನಟಿಯರು ಜೈಲಿನಲ್ಲಿ ಇಷ್ಟೊಂದು ಬದಲಾಗಿದ್ದೇಗೆ?

    ಜನಕ ರಾಜ್​ (55) ಹೆಸರಿನ ವ್ಯಕ್ತಿ ಪಂಜಾಬ್​ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಮೂಲದವನಾಗಿದ್ದು, ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ ತನ್ನ ಕೆಲಸ ಮುಗಿಸಿದ ಆತ ಕಾರಿನಲ್ಲಿ ನಿದ್ರೆಗೆ ಜಾರಿದ್ದಾನೆ. ಈ ಸಮಯದಲ್ಲಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಾರಿನಲ್ಲಿದ್ದ ಜನಕ ರಾಜ್​ ಅಲ್ಲಿಯೇ ಸಜೀವ ದಹನವಾಗಿದ್ದಾನೆ.

    ಜನಕ ರಾಜ್​ನ ದುರ್ಮರಣಕ್ಕೆ ರೈತ ಮುಖಂಡರು ಸೇರಿ ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. (ಏಜನ್ಸೀಸ್​)

    ಲಾಡ್ಜ್​ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್​!

    ತಾಯಿಯನ್ನು ಬಲಿ ಪಡೆದಿದ್ದ ಉಮಾಶ್ರೀ ಕಾರಿಗೆ ಮಗಳ ಜೀವವೂ ಹೋಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts