ಸಿಎಂ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದವನ ಬಂಧನ; ಆರೋಪಿ ಕೊಟ್ಟ ಕಾರಣ ಕೇಳಿ ಪೊಲೀಸರು ಶಾಕ್​​​

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿ ಇಮೇಲ್ ಕಳುಹಿಸಿದ್ದ ಕೋಲ್ಕತಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ಹೆಸರು ಮೊಹಮ್ಮದ್ ಜಾಹಿದ್ (51)ಬಿಹಾರದ ಬೇಗುಸರಾಯ್ ನಿವಾಸಿ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ: ಭಾರತಕ್ಕೆ ಬಂದಿಳಿದ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ; ಹಿಂಡನ್ ಏರ್​​ಬೇಸ್​​​​ನಲ್ಲಿ ಲ್ಯಾಂಡಿಂಗ್ ಆಗಿದ್ದು ಯಾಕೆ?

ಇಮೇಲ್​ ಕಳುಹಿಸಿದ ಮೊಹಮ್ಮದ್​​ ಜಾಹಿದ್​​ ತನಗೆ ಅಲ್-ಖೈದಾದೊಂದಿಗೆ ಸಂಬಂಧ ಇರುವುದಾಗಿ ಹೇಳಿಕೊಂಡಿದ್ದರು. ಆದರೆ ಈ ವ್ಯಕ್ತಿ ಯಾವುದೇ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.

ಆಗಸ್ಟ್ 2 ರಂದು ಸಚಿವಾಲಯ ಪೊಲೀಸ್ ಠಾಣೆ ಎಸ್‌ಎಚ್‌ಒ ಸಂಜೀವ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಜುಲೈ 16ರಂದು ಕಳುಹಿಸಲಾದ ಜಾಹಿದ್ ಇಮೇಲ್ ಹಿಂದಿನ ಉದ್ದೇಶವು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ತನ್ನ ಸಂಬಂಧಿಕರನ್ನು ಫ್ರೇಮ್ ಮಾಡಲು ಇಮೇಲ್ ಕಳುಹಿಸಿದ್ದಾಗಿ ಜಾಹಿದ್ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಪಾಟ್ನಾಗೆ ಕರೆತಂದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರದ ಸಿಎಂ ಕಚೇರಿಯನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಕಳುಹಿಸಿದ್ದ ಆರೋಪಿಯನ್ನು ನಾವು ಬಂಧಿಸಿದ್ದೇವೆ. ಅವರು ಇಮೇಲ್‌ನಲ್ಲಿ ಮೂರು ಮೊಬೈಲ್ ಸಂಖ್ಯೆಗಳನ್ನು ನಮೂದಿಸಿದ್ದಾರೆ. ತನಿಖೆಯ ನಂತರ, ಈ ಸಂಖ್ಯೆಗಳಿಗೆ ಸಂಬಂಧಿಸಿದ ವ್ಯಕ್ತಿಗಳಿಗು ಘಟನೆಗೂ ಯಾವುದೇ ಸಂಬಂಧ ಇಲ್ಲ ಎಂಬುದು ತಿಳಿದುಬಂದಿದೆ. ಪ್ರಮುಖ ಆರೋಪಿ ಈ ಮೂವರನ್ನು ಪೊಲೀಸರು ಬಂಧಿಸಬೇಕು ಎಂಬು ಸಂಚು ಹೂಡಿ ಇದೆಲ್ಲಾ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಕಳುಹಿಸಲು ಬಳಸಿದ ಮೊಬೈಲ್ ಫೋನ್​​​ ಅನ್ನು ವಶಪಡಿಸಿಕೊಳ್ಳಲಾಗಿದೆ. ಕೋಲ್ಕತಾದ ಬೌಬಜಾರ್ ಪ್ರದೇಶದಲ್ಲಿ ಜಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿ ಮೊಹಮ್ಮದ್ ಜಾಹಿದ್‌ನನ್ನು ಹೆಚ್ಚಿನ ತನಿಖೆಗಾಗಿ ಪಾಟ್ನಾಗೆ ವರ್ಗಾಯಿಸಲು ಟ್ರಾನ್ಸಿಟ್ ರಿಮಾಂಡ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)​​

48 ಗಂಟೆಗಳಲ್ಲಿ ಮಧ್ಯಂತರ ಸರ್ಕಾರ ರಚನೆ; ಸೇನಾ ಮುಖ್ಯಸ್ಥನ ಭರವಸೆ

Share This Article

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…