ಅಣ್ಣನ ಮಗಳನ್ನು ಮದುವೆಯಾದ ಯುವಕ; ಈ ವಿವಾಹಕ್ಕೆ ಗ್ರಾಮಸ್ಥರಿಂದ ವಿರೋಧ

Man married brothers daughter
Published on

ಉತ್ತರಪ್ರದೇಶ: ಯುವಕನೊಬ್ಬ ತನ್ನ ಸ್ವಂತ ಅಣ್ಣನ ಮಗಳನ್ನು ಮದುವೆಯಾಗಿರುವ ಘಟನೆ ಉತ್ತರಪ್ರದೇಶದ ಜೌನ್‌ಪುರ ಜಿಲ್ಲೆಯ ತಾಜುದ್ದೀನ್‌ಪುರ ಗ್ರಾಮದಲ್ಲಿ ನಡೆದಿದೆ.

ಶುಭಂ, ತನ್ನ ಅಣ್ಣನ ಮಗಳಾದ ರಿಯಾಳನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ತಮ್ಮ ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಮೊದಲು ಈ ವಿವಾಹಕ್ಕೆ ಇಬ್ಬರ ಮನೆಯವರು ಕೂಡ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಶುಭಂ ಮತ್ತು ರಿಯಾ ಈ ಮೊದಲೇ ನಾವು ಪ್ರೀತಿ ಮಾಡುತ್ತಿದ್ದೇವೆ, ಮದುವೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದು ಗಟ್ಟಿ ತೀರ್ಮಾನವನ್ನು ಮಾಡಿಕೊಂಡಿದ್ದರು. ಈ ಕಾರಣಕ್ಕೆ ಮನೆಯವರು ಕೂಡ ಈ ಮದುವೆಗೆ ಒಪ್ಪಿಗೆ ನೀಡಿದ್ದಾರೆ.

ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮಕ್ಕೆ ಇದು ವಿರುದ್ಧವಾಗಿದೆ. ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಮದುವೆಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಭಂ ಮತ್ತು ರಿಯಾ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇದೀಗ ನಾವು ಸ್ವಇಚ್ಫೆಯಿಂದ ಮದುವೆಯಾಗಿದ್ದೇವೆ, ಆಕೆ ನನ್ನ ಅಣ್ಣನ ಮಗಳು, ನಾನು ಅವಳಿಗೆ ಚಿಕ್ಕಪ್ಪ ಆಗಬೇಕು ಎಂದು ಶುಭಂ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net