Saif Ali Khan ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಶಂಕಿತ ಅರೆಸ್ಟ್​

Saif Ali Khan Accused
Published on

ಮುಂಬೈ: ನಟ ಸೈಫ್​ ಅಲಿ ಖಾನ್​ (Saif Ali Khan) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ.

ತಡರಾತ್ರಿ ನಟನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ ಆರೋಪಿಯನ್ನು ಘಟನೆ ನಡೆದ 30 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದು, ಸದ್ಯ ಆತನನ್ನು ಬಾಂದ್ರಾ ಪೊಲೀಸ್​ ಠಾಣೆಯಲ್ಲಿ ಇರಿಸಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು 20 ತಂಡಗಳನ್ನು ರಚಿಸಿದ್ದರು. ಸುಮಾರು 30 ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಡೆದಿದ್ದೇನು?

ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ಕಳ್ಳನೊಬ್ಬ ನುಗ್ಗಿದ್ದಾನೆ. ಕಳ್ಳ ಮನೆಗೆ ಪ್ರವೇಶಿಸಿದನ್ನು ಅರಿತುಕೊಂಡ ಮನೆಯ ಸಿಬ್ಬಂದಿ  ಎಚ್ಚರಗೊಂಡರು. ಮನೆಯಲ್ಲಿ ಗಲಾಟೆಯಿಂದ ನಿದ್ದೆಯಿಂದ ಎದ್ದ ಸೈಫ್ ಕಳ್ಳನನ್ನು ಹಿಡಿಯಲು ಯತ್ನಿಸಿದ್ದಾರೆ. ಇದೇ ವೇಳೆ ಕಳ್ಳ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ.  ಈ ಘಟನೆ ಬಳಿಕ ಕಳ್ಳ ತಲೆಮರೆಸಿಕೊಂಡಿದ್ದಾನೆ. ಆತನನ್ನು ಹಿಡಿಯಲು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಶ್ರಮಿಸುತ್ತಿದ್ದಾರೆ.

ಸೈಫ್ ಅಲಿ ಖಾನ್ (Saif Ali Khan) ಪತ್ನಿ, ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.   ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಶೀಘ್ರದಲ್ಲೇ ಪ್ರಕರಣದ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ. ಮನೆಯ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net