More

    ಪಾಕಿಸ್ತಾನ ಪರ ಬೇಹುಗಾರಿಕೆ; ಯುವಕ ಅರೆಸ್ಟ್​

    ಜೈಪುರ: ಪಾಕಿಸ್ತಾನ ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯು ಗಂಗಾನಗರ ಜಿಲ್ಲೆಯ ಸೂರತ್‌ಗಢದಲ್ಲಿ ಸೇನಾ ಸಮವಸ್ತ್ರ ಮಾರಾಟದ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

    ಬಂಧಿತನನ್ನು ಆನಂದ್ ರಾಜ್ ಸಿಂಗ್ (22) ಎಂದು ಗುರುತಿಸಲಾಗಿದ್ದು,  ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಮೂವರು ಮಹಿಳಾ ನಿರ್ವಾಹಕಿಯರೊಂದಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಸಂಜಯ್ ಅಗರ್ವಾಲ್​, ಶಂಕಿತ ಗಂಗಾನಗರ ಜಿಲ್ಲೆಯ ಸೂರತ್‌ಗಢದಲ್ಲಿ ಸೇನೆ ಕಂಟೋನ್ಮೆಂಟ್‌ನ ಹೊರಗಡೆ ಸಮವಸ್ತ್ರದ ಅಂಗಡಿ ನಡೆಸುತ್ತಿದ್ದ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ನಡೆಸುತ್ತಿರುವ ಬೇಹುಗಾರಿಕಾ ಚುಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿತ್ತು.

    ಇದನ್ನೂ ಓದಿ: ಪೆಟ್ರೋಲ್​-ಡೀಸೆಲ್​ ಅಗ್ಗ; ಯಾವ ರಾಜ್ಯದಲ್ಲಿ ದರ ಎಷ್ಟಿದೆ?

    ಬಂಧಿತ ಆರೋಪಿಯು ಸ್ವಲ್ಪ ಸಮಯದವರೆಗೆ ಕೆಲಸವನ್ನು ಬಿಟ್ಟು ಬೆಹ್ರೋರ್‌ ಪ್ರದೇಶದ ಕಾರ್ಖಾನೆ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಪಾಕಿಸ್ತಾನ ಗುಪ್ತಚರ ಸಂಸ್ಥೆಯ ನಿರಂತರ ಸಂಪರ್ಕದಲ್ಲಿದ್ದ ಈತ ಮೂವರು ಮಹಿಳಾ ನಿರ್ವಾಹಕಿಯರೊಂದಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿದ್ದ.

    ವಿವಿಧ ಮೂಲಗಳಿಂದ ಸೇನೆಯ ಗೌಪ್ಯ ಮಾಹಿತಿಯನ್ನು ಪಡೆದು ಅದನ್ನು ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ಹಂಚುತ್ತಿದ್ದ. ಇದಕ್ಕೆ ಪ್ರತಿಯಾಗಿ ಹಣದ ಬೇಡಿಕೆಯನ್ನು ಇರಿಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಸಂಜಯ್ ಅಗರ್ವಾಲ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts