ಮಿತವಾಗಿ ನೀರು ಬಳಸಿ: ಮಂಗಳೂರು ಮಹಾನಗರ ಪಾಲಿಕೆ ಮನವಿ

ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿರುವ ಹಿನ್ನೆಲೆ ಮತ್ತು ಪ್ರಸ್ತುತ ತುಂಬೆ ಡ್ಯಾಂನಲ್ಲಿ ಲಭ್ಯವಿರುವ ನೀರನ್ನು ಮುಂದಿನ ಏಪ್ರಿಲ್- ಮೇ ತಿಂಗಳು ಹಾಗೂ ಮಳೆ ಬರುವವರೆಗೆ ಪೂರೈಕೆ ಮಾಡಬೇಕಾಗಿರುವ ಕಾರಣ ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸುವಂತೆ ಮಂಗಳೂರು ಮಹಾನಗರ ಪಾಲಿಕೆ ಮನವಿ ಮಾಡಿದೆ.

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ನೇತ್ರಾವತಿ ನದಿಯಿಂದ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಕೊರತೆ ನಿಭಾಯಿಸಲು ಅನುಕೂಲವಾಗುವಂತೆ ಸಾರ್ವಜನಿಕರು ತಮ್ಮ ಮನೆಗಳಲ್ಲಿನ ಕೈತೋಟ, ವಾಹನ ತೊಳೆಯಲು, ಇನ್ನಿತರ ಕೆಲಸಗಳಿಗೆ ಕುಡಿಯುವ ನೀರನ್ನು ಬಳಸಬಾರದು. ನೀರನ್ನು ಪೋಲು ಮಾಡಬಾರದು ಎಂದು ಕೋರಲಾಗಿದೆ. ನಗರಪಾಲಿಕೆ ವ್ಯಾಪ್ತಿಯ ಕಟ್ಟಡ ಕಾಮಗಾರಿಗಳಿಗೆ ತೆಗೆದುಕೊಂಡ ನಳ್ಳಿ ನೀರಿನ ಸಂಪರ್ಕಗಳನ್ನು ತಕ್ಷಣ ಕಡಿತಗೊಳಿಸಿಕೊಂಡು ಮಹಾನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *