26.8 C
Bangalore
Friday, December 13, 2019

ವಿದ್ಯಾರ್ಥಿಗಳಿಗೆ ಹಲವು ಅವಕಾಶ: ಪ್ರೊ.ಎಂ.ಎಸ್.ಮೂಡಿತ್ತಾಯ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಉಳ್ಳಾಲ: ಇಂದು ಕಾಲಾನುಸಾರ ಶಿಕ್ಷಣ ವ್ಯವಸ್ಥೆಯಲ್ಲೂ ಸಾಕಷ್ಟು ಬದಲಾವಣೆ ಆಗಿವೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿರಿ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಹಕುಲಪತಿ ಪ್ರೊ.ಎಂ.ಎಸ್.ಮೂಡಿತ್ತಾಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಲೆಕ್ಚರ್ ಹಾಲ್‌ನಲ್ಲಿ ಶುಕ್ರವಾರ ‘ತೆರೆದ ಮನೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲಕ್ಕೆ ತಕ್ಕಂತೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕಿದ್ದರೆ, ಶೈಕ್ಷಣಿಕ ಜೀವನದಲ್ಲಿ ವಿದ್ಯಾರ್ಥಿಗಳು ಆಯ್ಕೆಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಇತರರಿಂದ ಮಾಹಿತಿ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ವಿವಿ ಉತ್ತ ಮ ಸಾಧನೆ ಮಾಡಿದೆ. ‘ತೆರೆದ ಮನೆ’ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಆಯ್ಕೆ ಅವಕಾಶ ಸಿಗುವಂತಾಗಿದೆ ಎಂದರು.
ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರವೀಂದ್ರಾಚಾರಿ ಉಪಸ್ಥಿತರಿದ್ದರು. ಕುಲಸಚಿವ ಪ್ರೊ.ಎ.ಎಂ.ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ಪ್ರೊ.ಪಿ.ಎಲ್.ಧರ್ಮ ವಂದಿಸಿದರು. ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

ಕಠಿಣ ಪರಿಶ್ರಮ ಅಗತ್ಯ
ಶೈಕ್ಷಣಿಕ ಜೀವನದಲ್ಲಿ ಮುಂದಿನ ಆಯ್ಕೆ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಸಿಗಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಆಶಿಸಿದರು. ಉತ್ತಮ ಅವಕಾಶಗಳಿಂದ ಗೊಂದಲದ ಪರಿಸ್ಥಿತಿ ಇಲ್ಲ. ಆದರೆ ಆಯ್ಕೆ ಮಾಡಿದ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಪರಿಶ್ರಮ, ಆಯ್ದ ವಿಷಯವನ್ನು ಪ್ರೀತಿಸಿದಾಗ ಮುಂದಿನ ದಾರಿಯಲ್ಲಿ ಅಡೆತಡೆಗಳಿದ್ದರೂ ಯಶಸ್ಸು ಸಾಧಿಸಬಹುದು ಎಂದರು.

ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಶಾರೀರಿಕ, ಮಾನಸಿಕ ಬೆಳವಣಿಗೆ ಹೊಂದುವ ವ್ಯಕ್ತಿತ್ವ ವಿಕಸನದ ಬಗ್ಗೆ ಗಮನ ಹರಿಸುವ ವಾತಾವರಣ ಅಗತ್ಯ. ಈ ನಿಟ್ಟಿನಲ್ಲಿ ಮಂಗಳೂರು ವಿವಿ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತಿದೆ. ಮುಂದಿನ ವರ್ಷಗಳಲ್ಲಿ ‘ತೆರೆದ ಮನೆ’ ಇನ್ನಷ್ಟು ವಿಭಿನ್ನವಾಗಿರಲಿದೆ.
– ಪ್ರೊ.ಪಿ.ಎಸ್.ಯಡಪಡಿತ್ತಾಯ, ಮಂಗಳೂರು ವಿವಿ ಕುಲಪತಿ

15ರಂದು ಓಪನ್ ಹೌಸ್
ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅಧ್ಯಯನಕ್ಕೆ ಲಭ್ಯವಿರುವ ವಿವಿಧ ಶೈಕ್ಷಣಿಕ ಕೋರ್ಸ್‌ಗಳ ಮಾಹಿತಿ ನೀಡುವ ಸಲುವಾಗಿ ಮಂಗಳೂರು ವಿವಿ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ವತಿಯಿಂದ ಜೂ.15 ರಂದು ಬೆಳಗ್ಗೆ 10 ರಿಂದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಓಪನ್ ಹೌಸ್ ಕಾರ್ಯಕ್ರಮ ನಡೆಯಲಿದೆ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....